ಮಂಗಳೂರು: 'ವಾರ್ತಾಭಾರತಿ' ದೈನಿಕದಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ದಯಾನಂದ ಕುಡುಪು ಅವರು ಸೋಮವಾರ ಸಂಜೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ದಯಾನಂದ ಕುಡುಪು (55) ಅವರು ವಾರದ ಹಿಂದೆ ಏಕಾಏಕಿ ಅಸ್ವಸ್ಥರಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಮ್ಮ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ.
ಉತ್ತಮ ಸ್ಯಾಕ್ಸೋಫೋನ್ ವಾದಕರಾಗಿದ್ದ ಅವರು ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳಲ್ಲಿ ತಮ್ಮ ಕಲಾ ನೈಪುಣ್ಯತೆಯನ್ನು ಪ್ರದರ್ಶಿಸಿದ್ದರು.