ETV Bharat / state

ಪತ್ರಕರ್ತೆ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ ನಿಧನ

ಬಹುಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪತ್ರಕರ್ತೆ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ 24 ವರ್ಷಗಳಿಂದ ದಿನಪತ್ರಿಕೆಯೊಂದರ ಸಂಪಾದಕೀಯ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ಪತ್ರಿಕಾ ರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

journalist Dr Seethalakshmi Karikkodi pasess away
ಖ್ಯಾತ ಪತ್ರಕರ್ತೆ ಡಾ.ಸೀತಾಲಕ್ಷ್ಮೀ ಕರ್ಕಿಕೋಡಿ ವಿಧಿವಶ
author img

By

Published : May 12, 2020, 11:22 PM IST

ಮಂಗಳೂರು(ದಕ್ಷಿಣ ಕನ್ನಡ): ದಿನಪತ್ರಿಕೆಯೊಂದರ ಹಿರಿಯ ಉಪ ಸಂಪಾದಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಬಂಟ್ವಾಳ ತಾಲೂಕಿನ ಅಡ್ಯನಡ್ಕದಲ್ಲಿ ಆರಂಭಿಕ ಶಿಕ್ಷಣ ಪಡೆದ ಅವರು, ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪದವಿ ಪಡೆದರು. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು, ಡಾಕ್ಟರೇಟ್ ಪದವಿಯನ್ನೂ ಸಹ ಪಡೆದಿದ್ದರು.

ಕಳೆದ 24 ವರ್ಷಗಳಿಂದ ದಿನಪತ್ರಿಕೆಯೊಂದರ ಸಂಪಾದಕೀಯ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಕೋಡಿಯವರಾದ ಇವರು, ಹಲವು ವರ್ಷಗಳಿಂದ ತಂದೆ, ತಾಯಿ ಜತೆ ಮಂಗಳೂರಿನ ಕೊಟ್ಟಾರ ಚೌಕಿಯ ಬಳಿ ವಾಸವಾಗಿದ್ದರು. ಪ್ರತಿಭಾನ್ವಿತೆಯಾಗಿದ್ದ ಇವರು, ಕನ್ನಡ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.