ETV Bharat / state

ಪ್ರತಿ ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ: ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು.

author img

By

Published : Jan 5, 2020, 11:54 PM IST

ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ, Journalists village stay program in sullia
ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಸುಳ್ಯ: ಗ್ರಾಮಗಳ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ. ಬದಲಾವಣೆಗಳು ಕೆಳ ಹಂತದಿಂದಲೇ ಆರಂಭವಾಗಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಜನಸಾಮಾನ್ಯರು ಪತ್ರಕರ್ತರೆದುರು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ ಮೂಲಕ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಗ್ರಾಮ ವಾಸ್ತವ್ಯದಲ್ಲಿ ಬಂದ ಮನವಿಗಳನ್ನು ವಿಶೇಷ ಪ್ರಕರಣಗಳು ಎಂದು ಭಾವಿಸಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಡೆದ ರಕ್ತದಾನ ಶಿಬಿರವನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಯು.ಟಿ. ಖಾದರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Intro:ಸುಳ್ಯ

ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ. ಬದಲಾವಣೆಗಳು ಕೆಳ ಹಂತದಿಂದಲೇ ಆರಂಭ ಆಗಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ರವರು ಹೇಳಿದರು.Body:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಜನಸಾಮಾನ್ಯರು ಪತ್ರಕರ್ತರಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ ಮೂಲಕ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ನಡೆದ ರಕ್ತದಾನ ಶಿಬಿರವನ್ನು ಸುಳ್ಯ ಶಾಸಕರಾದ ಎಸ್.ಅಂಗಾರ ರವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ರವರು ವಹಿಸಿದ್ದರು. ಗ್ರಾಮ ವಾಸ್ತವ್ಯದಲ್ಲಿ ಬಂದ ಮನವಿಗಳನ್ನು ವಿಶೇಷ ಪ್ರಕರಣಗಳು ಎಂದು ಭಾವಿಸಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಅವರು ಹೇಳಿದರು.

ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ನಂತರ ಮಾತನಾಡಿದ ಉಸ್ತುವಾರಿ ಸಚಿವರು ಸುಳ್ಯ ತಾಲೂಕಿನ ಅದರಲ್ಲೂ ಮಡಪ್ಪಾಡಿಯ ಸಮಸ್ಯೆಗಳನ್ನು ಶಾಸಕರೊಂದಿಗೆ ಚರ್ಚಿಸಿ ಕೂಡಲೇ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು.ಮತ್ತು ಇಲ್ಲಿಗೆ ವಿಶೇಷ ಅನುದಾನ ತರುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಾದ ಯು.ಟಿ ಖಾದರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್, ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಡಾ.ವಿಕ್ರಂ ಅಮ್ಟೇ, ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್, ಡಿವೈಎಸ್ಪಿ ದಿನಕರ್ ಶೆಟ್ಟಿ, ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಸೇರಿದಂತೆ ಎಲ್ಲಾ ಇಲಾಖೆಗಳ ಪ್ರಮುಖರು, ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಶಯ ಭಾಷಣ ಮಾಡಿದರು. ಜಿಲ್ಲಾ ಕಾರ್ಯಕಾರಣಿ ಸದಸ್ಯ ಲೋಕೇಶ್ ಪೆರ್ಲಂಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.Conclusion:ವೀಡಿಯೋಗಳು ಹಾಕಲಾಗಿದೆ.

ಬೈಟ್:- ಸಿಂಧೂ ಬಿ ರೂಪೇಶ್, ಜಿಲ್ಲಾಧಿಕಾರಿಗಳು ದ.ಕ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.