ಬೆಳ್ತಂಗಡಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜೊತೆ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ನಡೆಸಿದ ಕರ್ನಾಟಕ ಜನ ಸಂವಾದ ಕಾರ್ಯಕ್ರಮವನ್ನು ಶಾಸಕ ಶ್ರೀ ಹರೀಶ್ ಪೂಂಜಾ ನೇತೃತ್ವದಲ್ಲಿ ತಾಲೂಕು ಬಿಜೆಪಿ ಕಚೇರಿಯಲ್ಲಿ ವೀಕ್ಷಿಸಲಾಯಿತು.
ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಧರ್ಮಸ್ಥಳ, ಕೋಶಾಧಿಕಾರಿ ರತ್ನವರ್ಮ ಜೈನ್ ಧರ್ಮಸ್ಥಳ, ಉಪಾಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಹಿಂದುಳಿದ ಮೋರ್ಚಾ ಅಧ್ಯಕ್ಷ ಪ್ರಭಾಕರ್ ಆಚಾರ್ಯ ಸವಣಾಲ್, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಗೋಪಾಲಕೃಷ್ಣ ಕುಕ್ಕಳ, ನಗರದ ಹಿರಿಯ ಬಿಜೆಪಿ ಕಾರ್ಯಕರ್ತ ರಾಜೇಶ್ ಪೈ, ಸೋಷಿಯಲ್ ಮೀಡಿಯಾ ಮುಖ್ಯಸ್ಥ ಸುಪ್ರೀತ್ ಭಾಗವಹಿಸಿದ್ದರು ಹಾಗೂ ಕಾರ್ಯಕರ್ತರು ಶಾಸಕರಿಗೆ ಸಾಥ್ ನೀಡಿದರು.