ಕಡಬ/ಸುಳ್ಯ : ಬಿಜೆಪಿ ಕಡಬ ಶಕ್ತಿ ಕೇಂದ್ರದ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆಯ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಗಾಂಧಿ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಅಂಗಾರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮರ್ದಾಳದಿಂದ ಕಡಬದವರೆಗೆ ಸುಮಾರು 5 ಕಿ. ಮೀ ನಡಿಗೆಯ ಮೂಲಕ ಗಾಂಧಿ ಸಂಕಲ್ಪ ಯಾತ್ರೆ ಆಚರಿಸಿದರು.
ಮೊದಲು ಮರ್ದಾಳದಲ್ಲಿ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಮರ್ಪಿಸಿ ಬಳಿಕ ಪಾದಯಾತ್ರೆಯ ಮೂಲಕ ಗಾಂಧಿ ಟೋಪಿ ಧರಿಸಿದ ಬಿಜೆಪಿ ಕಾರ್ಯಕರ್ತರು ರಾಷ್ಟ್ರ ಧ್ವಜ ಹಿಡಿದುಕೊಂಡು ಕಡಬಕ್ಕೆ ಆಗಮಿಸಿದರು.
ಶಾಸಕ ಅಂಗಾರ ಸೇರಿದಂತೆ ಬಿಜೆಪಿ ಮುಖಂಡರು ಈ ಗಾಂಧಿ ನಡಿಗೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಕಡಬ ಶ್ರೀ ದುರ್ಗಾಂಬಿಕ ದೇವಸ್ಥಾನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಡಬದಲ್ಲಿ ಬೆಲ್ಲ ನೀರು ಕೊಟ್ಟು ಸಂಕಲ್ಪ ಯಾತ್ರೆಯನ್ನು ಸ್ವಾಗತಿಸಲಾಯಿತು.