ETV Bharat / state

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ: 7 ಆರೋಪಿಗಳಿಗೆ ಜಾಮೀನು - ಈಟಿವಿ ಭಾರತ ಕನ್ನಡ

ಕಡಬದಲ್ಲಿ ಇತ್ತೀಚೆಗೆ ನಡೆದ ಕಾಡಾನೆ ಸೆರೆ ಕಾರ್ಯಾಚರಣೆಯ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿತ್ತು.

kadaba-elephant-attack-case-bail-granted-to-accused
ಕಡಬ ಕಾಡಾನೆ ದಾಳಿ ಪ್ರಕರಣ : ಅಧಿಕಾರಿಗಳ ಹಲ್ಲೆ ಕೊಲೆ ಯತ್ನ.. ಆರೋಪಿಗಳಿಗೆ ಜಾಮೀನು
author img

By

Published : Mar 19, 2023, 8:09 AM IST

ಕಡಬ (ದಕ್ಷಿಣ ಕನ್ನಡ): ಕಾಡಾನೆಯೊಂದು ಯುವತಿ ಸೇರಿ ಇಬ್ಬರನ್ನು ಬಲಿ ಪಡೆದುಕೊಂಡ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಮೀನಾಡಿ ಸಮೀಪದ ನೈಲ ಎಂಬಲ್ಲಿ ನಡೆದಿತ್ತು. ಅರಣ್ಯ ಇಲಾಖೆ ಕಾಡಾನೆಯನ್ನು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿತ್ತು. ಕಾಡಾನೆಯನ್ನು ಕೊಂಡೊಯ್ಯುವಾಗ ಸ್ಥಳೀಯರ ಗುಂಪೊಂದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು. ಎಲ್ಲ ಕಾಡಾನೆಗಳನ್ನು ಸೆರೆಹಿಡಿದು ಕೊಂಡೊಯ್ಯುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ ಗುಂಪೊಂದು, ಅರಣ್ಯ ಮತ್ತು ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿತ್ತು. ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಆರೋಪ ಮಾಡಲಾಗಿತ್ತು. ಪ್ರಕರಣದಲ್ಲಿ ಕಡಬ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದರು.

ಬಂಧಿತರನ್ನು ಉಮೇಶ್ ಕಮರ್ಕಜೆ, ರಾಜೇಶ್ ಕನಡ ಕಮರ್ಕಜೆ, ಜನಾರ್ಧನ ರೈ ಕೊಲ್ಯ, ಕೋಕಿಲ ಕಮರ್ಕಜೆ, ತೀರ್ಥಕುಮಾರ ಕೋಲ್ಪೆ, ಗಂಗಾಧರ ಗೌಡ ಬಾರ್ಯ ಸಿರಿ ಬಾಗಿಲು ಮತ್ತು ಅಜಿತ್ ಕುಮಾರ್ ರೆಂಜಾಳ ಎಂದು ಗುರುತಿಸಲಾಗಿದೆ. ಈ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಕೋರಿ ವಕೀಲ ಮಹೇಶ್ ಕ.ಜೆ ಅವರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಘಟನೆಯ ವಿವರ: ಕಡಬದ ರೆಂಜಿಲಾಡಿ ನೈಲ ಎಂಬಲ್ಲಿ ಫೆಬ್ರವರಿ 20ರಂದು ಬೆಳಗ್ಗೆ ಕಾಡಾನೆಯೊಂದು ದಾಳಿ ನಡೆಸಿ ಇಬ್ಬರನ್ನು ಬಲಿ ಪಡೆದಿತ್ತು. ಇಲ್ಲಿನ ಪೇರಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ರಂಜಿತಾ ರೈ ಮತ್ತು ನೈಲ ನಿವಾಸಿ ರಮೇಶ್ ರೈ ಎಂಬವರು ಮೃತಪಟ್ಟಿದ್ದರು. ಗ್ರಾಮಸ್ಥರು ಎಲ್ಲ ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದರು.

ಈ ವಿಚಾರವನ್ನು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಯು.ಟಿ.ಖಾದರ್ ಪ್ರಸ್ತಾಪಿಸಿದ್ದರು. ಆ ಬಳಿಕ, ಫೆಬ್ರವರಿ 23ರಂದು ರಾತ್ರಿ ಕೊಂಬಾರು ಗ್ರಾಮದ ಮಂಡೆಕರ ಸಮೀಪದ ಮೂಜೂರು ಅರಣ್ಯ ಪ್ರದೇಶದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಒಂದು ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ಅದೇ ದಿನ ರಾತ್ರಿ 9:00 ಗಂಟೆ ಸುಮಾರಿಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಕಾರ್ಯಾಚರಣೆ ತಂಡ ಮುಂದಾದಾಗ ಸ್ಥಳೀಯರ ಗುಂಪೊಂದು ಕಾಡಾನೆ ಇದ್ದ ಲಾರಿಯನ್ನು ತಡೆದು ನಿಲ್ಲಿಸಿತ್ತು. ಅಲ್ಲದೇ ಎಲ್ಲ ಕಾಡಾನೆಗಳನ್ನೂ ಸೆರೆ ಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ಕೊಂಡು ಹೋಗುವಂತೆ ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದಿದ್ದರು. ಸೆರೆ ಹಿಡಿದ ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲ. ಆದ್ದರಿಂದ ನಾವು ಮೊದಲು ಹಿಡಿದ ಆನೆಯನ್ನು ಬಿಟ್ಟು ಬಳಿಕ ಉಳಿದ ಆನೆಗಳನ್ನು ಸೆರೆ ಹಿಡಿಯುವುದಾಗಿ ಅಧಿಕಾರಿಗಳು ಹೇಳಿದರೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್, ಅರಣ್ಯ ಇಲಾಖಾ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.

ಕೆಲವು ದುಷ್ಕರ್ಮಿಗಳು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ್ದಾಗಿ ಉಪವಲಯ ಅರಣ್ಯ ಅಧಿಕಾರಿ ಮದನ್ ಬಿ.ಕೆ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ಸೆಕ್ಷನ್​​ 143, 144, 147, 148, 341, 353, 332, 307, 427, 504, 506 ಜೊತೆಗೆ 149 IPC ಮತ್ತು 2(ಸಿ), Karnataka Prevention of Destruction And Loss Of Property Act 1981ರಂತೆ ಪ್ರಕರಣ ದಾಖಲಿಸಿಕೊಂಡು 7 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ನಂತರದಲ್ಲಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಕೋರಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಆರೋಪಿಗಳ ಪರ ವಕೀಲ ಮಹೇಶ್ ಕ.ಜೆ ಅವರ ವಾದವನ್ನು ಪುರಸ್ಕರಿಸಿದ ಜಿಲ್ಲಾ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಪ್ರಭಾರವನ್ನು ಹೊಂದಿರುವ ಆರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಅವರು ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಮಾರ್ಚ್ 17ರಂದು ಆದೇಶಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಇಬ್ಬರು ಬಲಿ: ಸ್ಥಳೀಯರಿಂದ ಆಕ್ರೋಶ, 15 ಲಕ್ಷ ಪರಿಹಾರ ಘೋಷಿಸಿದ ಡಿಸಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.