ಕಡಬ: ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ ಯುವತಿ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ತಾಲೂಕು ಬಿಳಿನೆಲೆ ಗ್ರಾಮದ ದೇವಸ್ಯ ಎಂಬಲ್ಲಿನ ತೀರ್ಥಲತಾ (20) ಎಂಬ ಯುವತಿ ಕಾಣೆಯಾಗಿದ್ದಾರೆ. ಈಕೆ ಮಂಗಳೂರಿನ ಐಡಿಯಲ್ ಐಸ್ ಕ್ರೀಂ ಫ್ಯಾಕ್ಟರಿಗೆ ಕೆಲಸಕ್ಕೆಂದು ಆಗಸ್ಟ್ 22 ರಂದು ತೆರಳಿದ್ದು, ಬಳಿಕ ಮನೆಗೆ ಮರಳಿ ಬಂದಿಲ್ಲ ಎಂದು ದೂರು ದಾಖಲಾಗಿದೆ.
ಇವರ ಬಗ್ಗೆ ಮಾಹಿತಿ ದೊರೆತವರು ಕಡಬ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಮಾಹಿತಿ ನೀಡುವಂತೆ ವಿನಂತಿಸಲಾಗಿದೆ.