ಬೆಳ್ತಂಗಡಿ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕೈಗೊಂಡಿದ್ದ ಚಾತುರ್ಮಾಸ್ಯ ವ್ರತ ಸೆ. 2ಕ್ಕೆ ಸಮಾಪನಗೊಂಡಿತು. ಈ ಸಂದರ್ಭದಲ್ಲಿ ನೇತ್ರಾವತಿ ನದಿಯನ್ನು ದಾಟುವುದರ ಮೂಲಕ ಸೀಮೋಲ್ಲಂಘನ ನಡೆಸಿ, ನೇತ್ರಾವತಿಗೆ ವಿಶೇಷ ಗಂಗೆ ಪೂಜೆ ನೆರವೇರಿಸಿದರು.
ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಈ ವೇಳೆ ಕ್ಷೇತ್ರದ ವತಿಯಿಂದ ಸ್ವಾಮೀಜಿಯವರನ್ನು ಗೌರವಿಸಲಾಯಿತು.