ETV Bharat / state

ಮೂರುವರೆ ವರ್ಷದಲ್ಲಿ ಮಾದರಿ ರಾಜ್ಯ ಮಾಡುವೆ: ಸಿಎಂ ಯಡಿಯೂರಪ್ಪ - ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ

ಕರ್ನಾಟಕವನ್ನು ಮಾದರಿ ರಾಜ್ಯ ಮಾಡುತ್ತೇನೆ. ಶಾಸಕರುಗಳ ನಿರೀಕ್ಷೆ ಪೂರ್ಣಗೊಳಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ರು.

Karnataka become a model state said by cm
ಸಿಎಂ ಯಡಿಯೂರಪ್ಪ
author img

By

Published : Dec 9, 2019, 12:10 AM IST

ಮಂಗಳೂರು: ಮುಂದಿನ ಮೂರುವರೆ ವರ್ಷಗಳಲ್ಲಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ. ನಮ್ಮ ಪ್ರತಿಯೊಬ್ಬ ಶಾಸಕರು ಏನೇನು ಅಪೇಕ್ಷೆ ಪಡುತ್ತಾರೋ, ಅದನ್ನು ಪೂರ್ಣಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಸಂಕಲ್ಪ ಮಾಡಿದ್ದೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಸಿಎಂ ಯಡಿಯೂರಪ್ಪ

ಬೆಳ್ತಂಗಡಿ ತಾಲೂಕಿನ ರತ್ನವರ್ಮ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ₹ 347 ಕೋಟಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿ, ನಾವು ಸ್ವಚ್ಚ, ದಕ್ಷ ಹಾಗೂ ಪ್ರಾಮಾಣಿಕ ಆಡಳಿತವನ್ನು ನೀಡುವ ಭರವಸೆ ನೀಡುತ್ತೇನೆ. ಬೆಳ್ತಂಗಡಿ ತಾಲೂಕಿನ ಕಣಿಯಾರ ಕ್ಷೇತ್ರವನ್ನು ಹೊಸ ಹೋಬಳಿಯನ್ನಾಗಿ ಘೋಷಣೆ ಮಾಡಿದ್ದೇನೆ. ತಾಲೂಕಿನ ಕೃಷಿಕರಿಗೆ ಅನುಕೂಲ ಮಾಡಲು ಪಶ್ಚಿಮ ವಾಹಿನಿ ಯೋಜನೆ ಮೂಲಕ ಕಿಂಡಿ ಅಣೆಕಟ್ಟುವಿಗೆ ಅನುದಾನ, ರಿಕ್ಷಾ ತಂಗುದಾಣಕ್ಕೆ ಅನುದಾನ, ಎಂಡೋ ಪೀಡಿತರಿಗೆ ಎಂಡೋಸಲ್ಫಾನ್ ಅನುದಾನ ನೀಡುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ದ.ಕ.ಜಿಲ್ಲಾ ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಭರತ್ ಶೆಟ್ಟಿ ಇದ್ದರು.

Intro:ಮಂಗಳೂರು: ಮುಂದಿನ ಮೂರುವರೆ ವರ್ಷಗಳಲ್ಲಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ. ನಮ್ಮ ಪ್ರತಿಯೊಬ್ಬ ಶಾಸಕರು ಏನೇನು ಅಪೇಕ್ಷೆ ಪಡುತ್ತಾರೋ, ಅದನ್ನು ಮೂರುವರೆ ವರ್ಷಗಳಲ್ಲಿ ಪೂರ್ಣಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನವಾದರೂ ಗೆಲ್ಲುವಂತಹ ಸಂಕಲ್ಪವನ್ನು ಮಾಡಿದ್ದೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ 347 ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿ, ನಾವು ಸ್ವಚ್ಚ, ದಕ್ಷ ಹಾಗೂ ಪ್ರಾಮಾಣಿಕ ಆಡಳಿತವನ್ನು ನಾನು ನೀಡುತ್ತೇನೆಂಬ ಭರವಸೆ ನೀಡುತ್ತೇನೆ ಎಂದು ಹೇಳಿದರು.

Body:ನಿನ್ನೆ ಒಡಿಯೂರು ಕ್ಷೇತ್ರದಲ್ಲಿ ಗುಡ್ಡ ಕುಸಿದು ಮೃತಪಟ್ಟವರ ಮನೆಯವರಿಗೆ ತಲಾ 3ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೀಡಲಿದ್ದೇವೆ. ಅದೇ ರೀತಿ ಇದರಿಂದ ತೀವ್ರವಾಗಿ ಗಾಯಗೊಂಡ ಓರ್ವನ ಚಿಕಿತ್ಸೆಗಾಗಿ ಒಂದು ಲಕ್ಷ ರೂ‌. ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಬೆಳ್ತಂಗಡಿ ತಾಲೂಕಿನ ಕಣಿಯಾರ ಕ್ಷೇತ್ರವನ್ನು ಹೊಸ ಹೋಬಳಿಯನ್ನಾಗಿ ಘೋಷಣೆ ಮಾಡಿದ್ದೇನೆ. ಅದೇ ರೀತಿ ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ಅನುಕೂಲ ಮಾಡಲು ಪಶ್ಚಿಮ ವಾಹಿನಿ ಯೋಜನೆ ಮೂಲಕ ಕಿಂಡಿ ಅಣೆಕಟ್ಟುವಿಗೆ ಅನುದಾನ, ರಿಕ್ಷಾ ತಂಗುದಾಣಕ್ಕೆ ಅನುದಾನ, ಎಂಡೋ ಪೀಡಿತರಿಗೆ ಎಂಡೋಸಲ್ಫಾನ್ ಅನುದಾನ ನೀಡುವ ಭರವಸೆ ನೀಡುತ್ತೇನೆ. ಇಂದು 337 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅನುದಾನ ಗಳ ಮೂಲಕ ರಸ್ತೆ ಅಭಿವೃದ್ಧಿ, ಕಿಂಡಿ ಅಣೆಕಟ್ಟು, ಮೂಲ ಸೌಕರ್ಯ, ಅಂಗನವಾಡಿ ನಿರ್ಮಾಣ ಮುಂತಾದ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಇದಕ್ಕಿಂತ ಮೊದಲು ಸಿಎಂ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ದ.ಕ.ಜಿಲ್ಲಾ ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಭರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Reporter_Vishwanath Panjimogaru

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.