ETV Bharat / state

ತಪ್ಪಿದ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್.. ಜೆಡಿಎಸ್​ನಿಂದ ಮೊಯ್ದಿನ್ ಬಾವ ಸ್ಪರ್ಧೆ - ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಾರಿ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಮೊಯ್ದಿನ್​ ಬಾವಗೆ ಕಾಂಗ್ರೆಸ್​ ನೀಡಿಲ್ಲ.

Karnataka election 2023  Congress ticket miss  Mohiuddin Bava contest from JDS  ತಪ್ಪಿದ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್  ಜೆಡಿಎಸ್​ನಿಂದ ಮೊಯ್ದಿನ್ ಬಾವ ಸ್ಪರ್ಧೆ  ನನ್ನ ಟಿಕೆಟ್ ಡಿಕೆಶಿ ಮಾರಾಟ ಮಾಡಿದ್ದಾರೆ  ರ್ನಾಟಕ ವಿಧಾನಸಭೆ ಚುನಾವಣೆ  ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ  ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್
ತಪ್ಪಿದ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್
author img

By

Published : Apr 20, 2023, 11:24 AM IST

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ರಾತ್ರಿ ಘೋಷಣೆಯಾಗಿದ್ದು, ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವ ಜೆಡಿಎಸ್​ನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ ಅನ್ನು ಉದ್ಯಮಿ‌ ಇನಾಯತ್ ಆಲಿ ಅವರಿಗೆ ಘೋಷಿಸಲಾಗಿದೆ. ಇನಾಯತ್ ಆಲಿ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಆಪ್ತರಾಗಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ 2013 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದ ಮೊಯ್ದಿನ್ ಬಾವ ಅವರು 2018 ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಎದುರು ಸೋಲನ್ನು ಅನುಭವಿಸಿದ್ದರು. ಅವರು ಈ ಬಾರಿ ಕಾಂಗ್ರೆಸ್ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಮೊಯ್ದಿನ್ ಬಾವ ಅವರು ಜೆಡಿಎಸ್ ಮುಖಂಡ, ವಿಧಾನಪರಿಷತ್ ಸದಸ್ಯ ಬಿಎಂ ಫಾರೂಕ್ ಅವರ ಸಹೋದರರಾಗಿದ್ದಾರೆ.

‘ನನ್ನ ಟಿಕೆಟ್ ಡಿಕೆಶಿ ಮಾರಾಟ ಮಾಡಿದ್ದಾರೆ’: ಟಿಕೆಟ್ ವಂಚಿತರಾದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮೊಯ್ದಿನ್ ಬಾವ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ನನ್ನ ಟಿಕೆಟ್ ಕೈತಪ್ಪಲು ನೇರ ಹೊಣೆಯಾಗಿದ್ದು, ಅವರು ಟಿಕೆಟ್ ಅನ್ನು ಮಾರಾಟ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನೇನು ತಪ್ಪು ಮಾಡಿದ್ದೇನೆ ಡಿಕೆಶಿಯವರೇ ಎಂದು ಪ್ರಶ್ನಿಸಿದ ಅವರು, ನನ್ನನ್ನು ವೈರಿಯಾಗಿ ಕಾಡಿ ಪಕ್ಷದ ಚಟುವಟಿಕೆಯಲ್ಲಿ ಎಲ್ಲೂ ಕಂಡು ಬಾರದ ಇನಾಯತ್ ಆಲಿ ಅವರಿಗೆ ಟಿಕೆಟ್ ಕೊಡುವ ಆಶ್ವಾಸನೆ ನೀಡಿದ್ದರು. ಆತ ಬಿಜೆಪಿ ವಿರುದ್ಧ ಹೋರಾಟ ಮಾಡಿದವರಲ್ಲ. ಮೊಯ್ದಿನ್ ಬಾವಾರ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ವಿಭಾಗ ಮಾಡಿ ಹಣದ ಆಮಿಷವೊಡ್ಡಿದವರ ವಿರುದ್ಧದಿಂದ ಅವರನ್ನು ಹೊರಗಡೆ ತಂದು ಪ್ರಚಾರ ಮಾಡಲು ಆರಂಭಿಸಿದೆ. ಟಿಕೆಟ್ ಕೈತಪ್ಪಲು ಕರಾವಳಿ ಭಾಗದಲ್ಲಿ ಏಕಾಂಗಿ ಶಾಸಕನೆಂದು ಬೀಗುತ್ತಿರುವ ಮಾನ್ಯರೊಬ್ಬರು ಕಾರಣ ಎಂದರು.

ಶಿವಮೊಗ್ಗದಲ್ಲಿ ಪಕ್ಷವನ್ನು ಮುಳುಗಿಸಿ ಈಗ ಎಂಎಲ್​ಸಿ ಆದವರೊಬ್ಬರೂ ಇದರಲ್ಲಿ ಸೇರಿಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಮಾಡಿರುವ ಸರ್ವೇಯನ್ನು ಶೇ.7ರಷ್ಟು ಜನರಿಗೆ‌ ಕೊಡುವಂತಹ ಕಾರ್ಯ ಆಗುತ್ತಿದೆ. ಡಿಕೆಶಿಯೊಬ್ಬರನ್ನು ಬಿಟ್ಟು ಸಿದ್ದರಾಮಯ್ಯ ಸೇರಿದಂತೆ ಸಿಇಸಿ ಕಮಿಟಿಯವರೆಲ್ಲರೂ ನನಗೆ ಪೂರ್ತಿ ಆಶೀರ್ವಾದ ಮಾಡಿದ್ದರು‌. ಆದರೆ ಇದೀಗ ಕಾರ್ಯಕರ್ತರ ಒತ್ತಡದಂತೆ ನಾನು ಜೆಡಿಎಸ್ ಪಕ್ಷ ಸೇರುತ್ತಿದ್ದೇನೆ. ಆದ್ದರಿಂದ ಈ ರಾಜ್ಯದಲ್ಲಿ ಅತ್ಯುತ್ತಮ ನಾಯಕ, ಒಳ್ಳೆಯ ಮನಸ್ಥಿತಿಯಿರುವ ಹೆಚ್​ಡಿ ಕುಮಾರಸ್ವಾಮಿಯವರ ಆಶೀರ್ವಾದವನ್ನು ಇಂದು ಬೆಳಗ್ಗೆ ಪಡೆದು ಜೆಡಿಎಸ್ ಸೇರ್ಪಡೆಗೊಂಡಿದ್ದೇನೆ‌. ಕಾಂಗ್ರೆಸ್ ಪಕ್ಷಕ್ಕೆ ನೋವಿನಲ್ಲಿ ಬಹಿರಂಗವಾಗಿ ರಾಜೀನಾಮೆ ಸಲ್ಲಿಸಿರುವ ನಾನು ಇಂದು ಮಧ್ಯಾಹ್ನ 1ಗಂಟೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.

ಓದಿ: ಮಾನಹಾನಿ ಕೇಸ್​: ಶಿಕ್ಷೆ ತಡೆ ಕೋರಿದ ರಾಹುಲ್​​ ಗಾಂಧಿ ಮೇಲ್ಮನವಿ ಅರ್ಜಿ ತೀರ್ಪು ಇಂದು

ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದರಿಂದ ಮಧ್ಯರಾತ್ರಿಯೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಐದು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸುವ ಮೂಲಕ ಎಲ್ಲ 224 ಕ್ಷೇತ್ರಗಳಿಗೂ ಕಾಂಗ್ರೆಸ್ ಹುರಿಯಾಳುಗಳನ್ನು ಅಂತಿಮಗೊಳಿಸಿದಂತಾಗಿದೆ. ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ರಾತ್ರಿ ಘೋಷಣೆಯಾಗಿದ್ದು, ಮಾಜಿ ಶಾಸಕ ಮೊಯ್ದಿನ್ ಬಾವ ಅವರಿಗೆ ಟಿಕೆಟ್​ ಕೈ ತಪ್ಪಿದ್ದು, ಜೆಡಿಎಸ್​ ಪಕ್ಷ ಸೇರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.