ETV Bharat / state

ವೈದ್ಯಕೀಯ ಸಲಕರಣೆಯಲ್ಲಿ ಅವ್ಯವಹಾರ: ಸ್ಪೀಕರ್ ರಾಜೀನಾಮೆಗೆ ಕೆಆರ್‌ಎಸ್ ಒತ್ತಾಯ - ಮಂಗಳೂರು

ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ರೂ. 300 ಕೋಟಿಯ ಅವ್ಯವಹಾರವಾಗಿದೆ ಎನ್ನಲಾಗಿದೆ. ಈ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ನೀಡಿದ ದೂರಿನನ್ವಯ ಪಿಎಸಿ ಸಮಿತಿ ಮೇಲ್ನೋಟಕ್ಕೆ ಅವ್ಯವಹಾರವಾಗಿದೆ ಎಂದು ಒಪ್ಪಿಕೊಂಡು ತನಿಖೆ ಆರಂಭಿಸಿದೆ.

Karnataka National Samithi demand
ಸ್ಪೀಕರ್ ರಾಜೀನಾಮೆಗೆ ಕರ್ನಾಟಕ ರಾಷ್ಟ್ರ‌ಸಮಿತಿ ಒತ್ತಾಯ
author img

By

Published : Jun 6, 2020, 5:19 PM IST

ಮಂಗಳೂರು: ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಮುಂದಾದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಗೆ ಸಂವಿಧಾನಬಾಹಿರವಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆಯವರು ತಡೆಯಾಜ್ಞೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ ಆಗ್ರಹಿಸಿದ್ದಾರೆ.

ಸ್ಪೀಕರ್ ರಾಜೀನಾಮೆಗೆ ಕರ್ನಾಟಕ ರಾಷ್ಟ್ರ‌ಸಮಿತಿ ಒತ್ತಾಯ

ಮಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ರೂ. 300 ಕೋಟಿಯ ಅವ್ಯವಹಾರವಾಗಿದೆ. ಈ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ನೀಡಿದ ದೂರಿನನ್ವಯ ಪಿಎಸಿ ಸಮಿತಿ ಮೇಲ್ನೋಟಕ್ಕೆ ಅವ್ಯವಹಾರವಾಗಿದೆ ಎಂದು ಒಪ್ಪಿಕೊಂಡು ತನಿಖೆ ಆರಂಭಿಸಿದೆ. ಆದರೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅವರು ಪಿಎಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ. ಲಾಕ್‌ಡೌನ್ ತೆರವಾದ ಬಳಿಕವೂ ತನಿಖೆಗೆ ಅವಕಾಶ ನೀಡಲಿಲ್ಲ. ಈ ಬಗ್ಗೆ ಹೆಚ್.ಕೆ.ಪಾಟೀಲ್ ಮತ್ತು ಪಿಎಸಿ‌ ಸಮಿತಿ ಹಕ್ಕುಚ್ಯುತಿ ಮಂಡಿಸಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಮಂಡಿಸಲಿರುವ ಹೆಚ್. ಕೆ. ಪಾಟೀಲ್ ಮತ್ತು ಪಿಎಸಿ ಸಮಿತಿಗೆ ನೈತಿಕ ಬೆಂಬಲ ನೀಡುತ್ತದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.