ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ನಡೆಸಲ್ಪಡುವ 6 ಮೇಳಗಳ ಯಕ್ಷಗಾನ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ.
ರಾಜ್ಯ ಸರ್ಕಾರವು ರಾತ್ರಿ 10.30 ರಿಂದ ಐವತ್ತು ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕಗಳನ್ನು ಬಳಸಬಾರದು ಎಂದು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಯಕ್ಷಗಾನದ ಪ್ರದರ್ಶನದ ಸಮಯವನ್ನು ಬದಲಾಯಿಸಿ ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯಿಸಲಾಗಿದೆ. ಈ ಸಮಯದಲ್ಲಿ ಯಕ್ಷಗಾನ ಪ್ರದರ್ಶನದ ಸ್ವರೂಪ ಮತ್ತು ಚಿಂತನೆಗಳ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರವಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಇದನ್ನೂ ಓದಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್