ETV Bharat / state

ಖೋಟಾ ನೋಟು ಸಾಗಾಟ: ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿ ಅರೆಸ್ಟ್‌ - Kalander Siddique arrested for kota money

19 ವರ್ಷಗಳ ಹಿಂದೆ ಖೋಟಾ ನೋಟು ಸಾಗಾಟದ ವೇಳೆ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್‌ನಲ್ಲಿ ಸಂಪ್ಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಅವರಲ್ಲಿ ಕಾಸರಗೋಡು ಮುಳಿಯಾರ್ ಬೋವಿಕ್ಕಾನ ಪರಪಿಡಕ ನಿವಾಸಿ ಸಿದ್ದಿಕ್ ಯಾನೆ ಕಲಂದರ್ ಸಿದ್ದಿಕ್ (41) ತಪ್ಪಿಸಿಕೊಂಡಿದ್ದ.

kerala-based-accused-arrested
ಸಿದ್ದಿಕ್ ಯಾನೆ ಕಲಂದರ್ ಸಿದ್ದಿಕ್
author img

By

Published : Sep 9, 2021, 9:27 PM IST

ಪುತ್ತೂರು: ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಕುಂಬ್ಳೆಯಲ್ಲಿ ಸಂಪ್ಯ ಪೊಲೀಸರು ಬಂಧಿಸಿದ್ದಾರೆ.

19 ವರ್ಷಗಳ ಹಿಂದೆ ಖೋಟಾ ನೋಟು ಸಾಗಾಟದ ವೇಳೆ ಮೈಸೂರು ರಾಷ್ಟ್ರೀಯ ಹೆದ್ದಾರಿ ಸೆಂಟ್ಯಾರ್‌ನಲ್ಲಿ ಸಂಪ್ಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಅವರಲ್ಲಿ ಕಾಸರಗೋಡು ಮುಳಿಯಾರ್ ಬೋವಿಕ್ಕಾನ ಪರಪಿಡಕ ನಿವಾಸಿ ಸಿದ್ದಿಕ್ ಯಾನೆ ಕಲಂದರ್ ಸಿದ್ದಿಕ್ (41) ತಪ್ಪಿಸಿಕೊಂಡಿದ್ದ. ಇದೀಗ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

2002ರಲ್ಲಿ ಕಲಂದರ್ ಸಿದ್ದಿಕ್ ಮತ್ತು ಇತರ ಮೂವರು ಸುಮಾರು 80 ಸಾವಿರದಷ್ಟು ಖೋಟಾ ನೋಟನ್ನು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿಸಿದ್ದಾರೆ. ಆಗ ಸೆಂಟ್ಯಾರ್‌ನಲ್ಲಿದ್ದ ಸಂಪ್ಯ ಪೊಲೀಸರು ಅವರನ್ನು ತಡೆದಿದ್ದಾರೆ. ನಂತರ ಅನುಮಾನಗೊಂಡು ತಪಾಸಣೆ ನಡೆಸಿ ಬಂಧಿಸಿದ್ದರು. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆಮೇಲೆ ಆರೋಪಿಗಳು ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆ ಹೊಂದಿದ್ದರು.

ಆದರೆ, ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವ ವೇಳೆ ಹಾಜರಾಗದೆ ಆರೋಪಿಗಳು ತಲೆಮರೆಸಿಕೊಂಡಿದ್ದರು. ಹೀಗಾಗಿ, ನ್ಯಾಯಾಲಯ ಆರೋಪಿಗಳ ಮೇಲೆ ವಾರಂಟ್ ಜಾರಿ ಮಾಡಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವನೆ ಮತ್ತು ಡಿವೈಎಸ್​ಪಿ ಡಾ. ಗಾನ ಪಿ ಕುಮಾರ್ ಹಾಗೂ ಗ್ರಾಮಾಂತರ ವೃತ್ತ ನಿರೀಕ್ಷಕರ ಮಾರ್ಗದರ್ಶನದಂತೆ ಪುತ್ತೂರು ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯರವಿ ಮತ್ತು ಸಿಬ್ಬಂದಿ ಅದ್ರಾಮ ಮತ್ತು ಪ್ರವೀಣ್ ರೈ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ಕೋವಿಡ್​ನಿಂದ ತಬ್ಬಲಿಗಳಾದ ಮಕ್ಕಳು.. ಅನಾಥರಿಗೆ ಆಸರೆಯಾದ ಬಾಲಸೇವಾ ಯೋಜನೆಯ ಸ್ಥಿತಿಗತಿ ಹೇಗಿದೆ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.