ETV Bharat / state

ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದ ಕೋಳಿ ಸಾಗಣೆ ನಿರ್ಬಂಧ: ಜಿಲ್ಲಾಧಿಕಾರಿ ಸೂಚನೆ - ಹಕ್ಕಿ ಜ್ವರ,

ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದ ಕೋಳಿ ಸಾಗಣೆ ನಿರ್ಬಂಧಿಸುವಂತೆ ಅಧಿಕಾರಿಗಳಿಗೆ ದ.ಕ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Kerala poultry transport restricted, Kerala poultry transport restricted to Dakshina Kannada district, Kerala poultry transport restricted news, Bird flu, Bird flu news, ಕೇರಳದ ಕೋಳಿ ಸಾಗಾಣಿಕೆಗೆ ನಿರ್ಬಂಧ, ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದ ಕೋಳಿ ಸಾಗಾಣಿಕೆಗೆ ನಿರ್ಬಂಧ, ಕೇರಳದ ಕೋಳಿ ಸಾಗಾಣಿಕೆಗೆ ನಿರ್ಬಂಧ ಸುದ್ದಿ, ಹಕ್ಕಿ ಜ್ವರ, ಹಕ್ಕಿ ಜ್ವರ ಸುದ್ದಿ,
ಜಿಲ್ಲಾಧಿಕಾರಿ ಸೂಚನೆ
author img

By

Published : Jan 8, 2021, 7:05 AM IST

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳ ರಾಜ್ಯದಿಂದ ಬರುವ ಎಲ್ಲ ರೀತಿಯ ಕುಕ್ಕುಟ ಮತ್ತು ಕುಕ್ಕುಟ ಉತ್ಪನ್ನಗಳ ಸಾಗಣೆ ನಿರ್ಬಂಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಳಿಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅದೇ ರೀತಿ ಕೇರಳ ರಾಜ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರವಾನಿಸುವ ಕುಕ್ಕುಟ ಹಾಗೂ ಕುಕ್ಕುಟ ಉತ್ಪನ್ನಗಳ ವಾಹನಗಳನ್ನು ರಾಜ್ಯಮಟ್ಟದ ಗಡಿಭಾಗದಲ್ಲಿ ಔಷಧ ಸಿಂಪಡಿಸಿ ಕಳುಹಿಸಬೇಕು ಎಂದು ಅವರು ಸೂಚಿಸಿದರು.

ಕೋಳಿ ಶೀತ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಕೇರಳ ರಾಜ್ಯದ ಕೊಟ್ಟಾಯಂ ಮತ್ತು ಅಲಪ್ಪುಳ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಕೋಳಿ ಶೀತ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಈ ರೋಗ ಹರಡುವ ಸಾಧ್ಯತೆ ಇರುವುದರಿಂದ ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ ನೀರು ಸಂಗ್ರಹ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲೀಕರು ಅಗತ್ಯ ಕ್ರಮ ವಹಿಸುವುದರ ಜೊತೆಗೆ ಅನಗತ್ಯವಾಗಿ ಜನರ ಓಡಾಟ ನಿರ್ಬಂಧಿಸಬೇಕು ಎಂದರು.

ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿಜ್ವರಗಳ ಲಕ್ಷಣ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದರು.

ರೋಗದ ಪರಿಶೀಲನೆ ಮಾಡಲು ಜಿಲ್ಲೆಯಲ್ಲಿರುವ ಕೋಳಿ ಫಾರಂಗೆ ಪಶುಪಾಲನಾ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಸೂಚನೆ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಪಶು ಇಲಾಖೆಯ ಉಪನಿರ್ದೇಶಕ ಪ್ರಸನ್ನಕುಮಾರ್ , ಪ್ರಾದೇಶಿಕ ಸಂಶೋಧನಾ ಅಧಿಕಾರಿ ವಸಂತ ಶೆಟ್ಟಿ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.