ETV Bharat / state

ಕೇರಳದ ವಿದ್ಯಾರ್ಥಿಗಳಿಗೆ ಕಡ್ಡಾಯ ಕೋವಿಡ್ ತಪಾಸಣೆ : ಡಾ.ಕೆ.ವಿ.ರಾಜೇಂದ್ರ

author img

By

Published : Feb 8, 2021, 3:23 PM IST

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ದ.ಕ.ಜಿಲ್ಲೆಯು ಗಡಿ ಪ್ರದೇಶವಾಗಿರುವುದರಿಂದ ಮುಂಜಾಗ್ರತಾ ಕ್ರಮವಹಿಸಲು ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಕಮಿಷನರೇಟ್ ವತಿಯಿಂದ ಚರ್ಚೆ ನಡೆಸಲಾಗಿದೆ..

dr-kv-rajendra
ಡಾ.ಕೆ.ವಿ.ರಾಜೇಂದ್ರ

ಮಂಗಳೂರು : ನಗರದ ಮೆಡಿಕಲ್, ನರ್ಸಿಂಗ್ ಹಾಗೂ ಇನ್ನಿತರ ಶಿಕ್ಷಣ ಸಂಸ್ಥೆಗಳಲ್ಲಿ ಕೇರಳದ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಂಡು ಬರುತ್ತಿದೆ‌.

ಈ ಹಿನ್ನೆಲೆ ಎಲ್ಲಾ ಕಾಲೇಜುಗಳ ಕೇರಳದ ವಿದ್ಯಾರ್ಥಿಗಳನ್ನು ಗುರುತಿಸಿ, ಅವರೆಲ್ಲರನ್ನೂ ಕೋವಿಡ್ ತಪಾಸಣೆಗೊಳಪಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ.

ಡಿ ಸಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿದರು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ಕೋವಿಡ್ ತಪಾಸಣೆ ನಡೆಸದೆ ಅವರನ್ನು ಕಾಲೇಜುಗಳಿಗೆ ತೆಗೆದುಕೊಳ್ಳದಂತೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಮೂಲಕ ಕೋವಿಡ್ ಪ್ರಕರಣಗಳನ್ನು ಕಡಿಮೆ ಮಾಡಲು ಜಿಲ್ಲಾಡಳಿತದಿಂದ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಾಗುತ್ತದೆ ಎಂದು ತಿಳಿಸಿದರು.

ಕೇರಳ ಹಾಗೂ ದ.ಕ.ಜಿಲ್ಲೆಯ ಗಡಿ ಭಾಗಗಳಲ್ಲಿ ನಿತ್ಯ ಸಂಚಾರ ನಡೆಸುವವರಿಗೆ 15 ದಿನಗಳಿಗೊಮ್ಮೆ ಕೋವಿಡ್ ತಪಾಸಣೆ ನಡೆಸುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಲಾಕ್​ಡೌನ್​ ಸಂದರ್ಭದಲ್ಲಿ 1000 ಮಂದಿ ಕೋವಿಡ್ ಪಾಸ್ ಪಡೆದುಕೊಂಡಿದ್ದು, 500ರಷ್ಟು ಅಧಿಕಾರಿಗಳ ಮೂಲಕ ಅವರು ಎಲ್ಲಿ ಕೆಲಸ ಮಾಡುತ್ತಾರೋ ಅಲ್ಲಿ ಅವರ ಸುತ್ತಮುತ್ತಲು ಇರುವವರನ್ನು 15 ದಿನಗಳಿಗೊಮ್ಮೆ ತಪಾಸಣೆ ನಡೆಸುವ ವ್ಯವಸ್ಥೆ ಮಾಡಲಾಗಿದೆ.

ಗಡಿ ಪ್ರದೇಶವಾದ್ದರಿಂದ ಜನಸಂಚಾರಕ್ಕೆ ಯಾವುದೇ ತೊಂದರೆ ಮಾಡದೆ ಕೋವಿಡ್ ನಿಗ್ರಹ ಮಾಡುವುದು ಬಹಳ ಸವಾಲಿನ ಕೆಲಸ. ಆದ್ದರಿಂದ ಜಿಲ್ಲಾಡಳಿತದ ಮೂಲಕ ಕೋವಿಡ್ ಸೋಂಕು ಉಲ್ಬಣವಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದರು.

ದ.ಕ.ಜಿಲ್ಲೆಯಲ್ಲಿ 6-8 ಸಾವಿರ ವಿದ್ಯಾರ್ಥಿಗಳು ಕೇರಳದವರೇ ಇದ್ದಾರೆ. ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು ಸೋಂಕಿತರಾಗಿರುವುದು ಕಂಡು ಬಂದಿದೆ. ಆದ್ದರಿಂದ ಕಡ್ಡಾಯವಾಗಿ ಎಲ್ಲರಿಗೂ ಸೋಂಕು ತಪಾಸಣೆ ನಡೆಸುವ ಕಾರ್ಯ ಮಾಡಲಾಗುತ್ತದೆ ಎಂದು ಹೇಳಿದರು.

ಓದಿ: ಅಳಿವಿನಂಚಿನಲ್ಲಿರುವ ಪಕ್ಷಿಗಳ ಉಳಿವಿಗಾಗಿ ಶ್ರಮಿಸುತ್ತಿರುವ ಪರಿಸರ ಪ್ರೇಮಿ

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ದ.ಕ.ಜಿಲ್ಲೆಯು ಗಡಿ ಪ್ರದೇಶವಾಗಿರುವುದರಿಂದ ಮುಂಜಾಗ್ರತಾ ಕ್ರಮವಹಿಸಲು ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಕಮಿಷನರೇಟ್ ವತಿಯಿಂದ ಚರ್ಚೆ ನಡೆಸಲಾಗಿದೆ.

ಮಾಸ್ಕ್ ಕಡ್ಡಾಯ ಧಾರಣೆಗೆ ತಂಡ ರಚನೆ ಮಾಡಲಾಗುತ್ತದೆ. ಈ ತಂಡಗಳು ವಿವಿಧ ಅಂಗಡಿ-ಮುಂಗಟ್ಟುಗಳು, ಕಚೇರಿ, ಇನ್ನಿತರ ಸಂಸ್ಥೆಗಳಿಗೆ ದಾಳಿ ನಡೆಸಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ, ಉದ್ದಿಮೆ ಪರವಾನಿಗೆ ರದ್ದುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಸಾರಿಗೆ ಸಂಚಾರಿ ವಾಹನಗಳಲ್ಲಿಯೂ ಕಡ್ಡಾಯ ಮಾಸ್ಕ್ ಧಾರಣೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಅಲ್ಲದೆ ಅಗತ್ಯವಿರುವೆಡೆಗಳಲ್ಲಿ ರ್ಯಾಟ್ ತಪಾಸಣೆ (ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌), ಆರ್‌ಟಿಪಿಸಿಆರ್ ತಪಾಸಣೆಗಳನ್ನು ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ‌ ಎಂದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.