ಮಂಗಳೂರು: ರಾಜ್ಯದ ಜನತೆಯ ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ಬಜ್ಪೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಿಬ್ಬಂದಿ ಕೊರತೆ, ಲ್ಯಾಬ್ ಇನ್ನಿತರ ಮೂಲಭೂತ ಕೊರತೆಗಳಿದ್ದಲ್ಲಿ ಅಥವಾ ಹೆಚ್ಚುವರಿ ವ್ಯವಸ್ಥೆಗಳ ಅಗತ್ಯವಿದ್ದಲ್ಲಿ ಸರ್ಕಾರದ ಜೊತೆ ಮಾತನಾಡಿ ಪರಿಹಾರ ನೀಡುವ ಭರವಸೆ ನೀಡಿದರು.
ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಂದಿ ಖಾಸಗಿ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ. ಆದ್ದರಿಂದ ಸರಕಾರಿ ವೈದ್ಯರು ಜನತೆಯ ನಂಬಿಕೆಗೆ ಪಾತ್ರರಾಗಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಎಂದರು.
ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ದ.ಕ. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಪಂ ಅಧ್ಯಕ್ಷ ಮಹಮ್ಮದ್ ಮೋನು, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಜನಾರ್ದನ ಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಹಾಗೂ ಗ್ರಾಪಂ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.