ETV Bharat / state

ಮಳೆಗಾಲದ ಮುಂಜಾಗ್ರತೆ ಬಗ್ಗೆ ಬೇಜವಾಬ್ದಾರಿ ತೋರಿದರೆ ಕಠಿಣ ಕ್ರಮ: ಕೋಟ ಶ್ರೀನಿವಾಸ ಪೂಜಾರಿ - ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಶಿರಾಡಿ, ಸಂಪಾಜೆ, ಚಾರ್ಮಾಡಿ ಭಾಗಗಳಲ್ಲಿ ಭೂಕುಸಿತ ಸಮಸ್ಯೆ ಸಂಭವಿಸುವುದರಿಂದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿರಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಾಯದ ಸ್ಥಿತಿ ಎದುರಾದರೆ ಅವರೇ ಜವಾಬ್ದಾರರಾಗುತ್ತಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.

Mangalore
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
author img

By

Published : Jun 13, 2020, 1:58 AM IST

ಮಂಗಳೂರು: ಮಳೆಗಾಲದ ತುರ್ತು ಪರಿಸ್ಥಿತಿ ಸಂದರ್ಭ ಎಲ್ಲಾ ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ನಿರ್ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸಿದಲ್ಲಿ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.

ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಗಳಲ್ಲಿ ಬೀಳುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು. ಗುಡ್ಡ ಕುಸಿತದ ಬಗ್ಗೆ ಅಗತ್ಯ ಕ್ರಮಗಳನ್ನು ವಹಿಸಬೇಕು. ಕಳೆದ ಬಾರಿ ಜಿಲ್ಲೆಯಲ್ಲಿ ಉಂಟಾಗಿರುವ ಪ್ರಾಕೃತಿಕ ವಿಕೋಪದಿಂದಾಗಿರುವ ಅನಾಹುತಗಳನ್ನು ಮನಗಂಡು ಹೆಚ್ಚಿನ ಆಸ್ಥೆ ವಹಿಸಿ ಸರಿಯಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚರಂಡಿ ನೀರಿನ ವ್ಯವಸ್ಥೆ, ವಿದ್ಯುತ್ ವ್ಯತ್ಯಯ, ಅಪಾಯಕಾರಿ ಮರಗಳು ಬೀಳುವ ಸಂಭವ ಮುಂತಾದ ಯಾವುದೇ ಸಮಸ್ಯೆಗಳಿದ್ದರೂ ಗ್ರಾಮೀಣ ಮಟ್ಟದಲ್ಲಿ ಪಿಡಿಒ ಹಾಗೂ ನೋಡಲ್ ಅಧಿಕಾರಿಗಳು ಗಮನಿಸಿ ಪರಿಹಾರ ಒದಗಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮಾತನಾಡಿ, ದ.ಕ. ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ನ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಕಡಲ ಕಿನಾರೆಗಳಲ್ಲಿ ನಾಮಫಲಕಗಳನ್ನು ಅಳವಡಿಸಿ ಗೃಹ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕೃತಕ ನೆರೆಯಾಗುವ ಪ್ರದೇಶಗಳನ್ನು ಹಾಗೂ ನದಿ ತೀರದ ಹಳ್ಳಿಗಳಲ್ಲಿ ತುರ್ತು ಪರಿಸ್ಥಿತಿಗೆ ಸಂಬಂಧಪಟ್ಟಂತೆ ಜನರ ರಕ್ಷಣೆಗೆ ಬೋಟುಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಅತಿವೃಷ್ಠಿ ಪ್ರವಾಹದ ಸಂದರ್ಭದಲ್ಲಿ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ರಾಜ್ಯ ವಿಪತ್ತು ನಿರ್ವಹಣಾ, ರಾಷ್ಟ್ರೀಯ ವಿಪತ್ತು ಪಡೆ, ಅರೆಸೇನಾ ಪಡೆ, ವಾಯುಪಡೆ ಹಾಗೂ ಗೃಹರಕ್ಷಕ ದಳ ಇಲಾಖೆ ಹಾಗೂ ರಕ್ಷಣಾ ಸಿಬ್ಬಂದಿ ಸಹಯೋಗದೊಂದಿಗೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಬಿ. ಸಿಂಧೂ ರೂಪೇಶ್ ಮಾತನಾಡಿ, ಹವಾಮಾನ ವೈಪರಿತ್ಯದಿಂದಾಗಿ ದೋಣಿಯ ಮೂಲಕ ರಕ್ಷಣೆ ಮಾಡಲು ಸಾಧ್ಯವಾಗದೆ ಇದ್ದಲ್ಲಿ ಹೆಲಿಕಾಪ್ಟರ್ ಮೂಲಕ ಜನರನ್ನು ಸ್ಥಳಾಂತರಿಸುವ ವ್ಯವಸ್ಥೆ ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತದೆ. ನೆರೆಪೀಡಿತ ಹಾಗೂ ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ತಾಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳಲ್ಲಿ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಗೃಹಪಯೋಗಿ ವಸ್ತುಗಳನ್ನು, ಜೀವನಾವಶ್ಯಕ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಉಪಮೇಯರ್ ವೇದಾವತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.