ETV Bharat / state

ಕೋವಿಡ್​ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

author img

By

Published : Jan 16, 2021, 4:48 PM IST

ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಆಯುಷ್​ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವ ಅಂಗಾರ ಅವರೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋವಿಡ್​​ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೋ-ಲಸಿಕೆ
ಕೋ-ಲಸಿಕೆ

ಮಂಗಳೂರು: ದೇಶಾದ್ಯಂತ ಕೊರೊನಾ ನಿಯಂತ್ರಣಕ್ಕೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.

ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಆಯುಷ್​ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವ ಅಂಗಾರ ಅವರೊಂದಿಗೆ ಸಚಿವ ಕೋಟ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಲಸಿಕೆ ಬಂದಿರುವುದು ಸಮಾಧಾನ ತಂದಿದೆ. ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪ್ರಧಾನಮಂತ್ರಿಗಳು ಅಚ್ಚುಕಟ್ಟಾಗಿ ಎಲ್ಲರೂ ತೆಗೆದುಕೊಳ್ಳುವ ಜೊತೆಗೆ ಮಾಸ್ಕ್ ಧರಿಸಬೇಕು ಎಂದು ಹೇಳಿದ್ದಾರೆ.

ಲಸಿಕೆಗೆ ಚಾಲನೆ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೊರೊನಾ ನಿಯಂತ್ರಣದ ಒಂದು ಭಾಗವಾಗಿ ಮಾಸ್ಕ್ ಧರಿಸಿ ಎಲ್ಲಾ ಕಾರ್ಯಚಟುವಟಿಕೆಗಳನ್ನು ಮಾಡಬೇಕು‌. ಭಾರತದಲ್ಲಿ ತಯಾರಾದ ಲಸಿಕೆಗೆ ವಿದೇಶದಲ್ಲೂ ಬೇಡಿಕೆಯಿರುವುದು ಖುಷಿಯ ವಿಚಾರ ಎಂದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಶಾಸಕ ವೇದವ್ಯಾಸ ಕಾಮತ್ ಮೊದಲಾದವರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.