ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳೂರಿಗೆ ಬಂದ್ರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಹೇಳಿರುವ ಕಾಂಗ್ರೆಸ್ ನಾಯಕ ಐವಾನ್ ಡಿಸೋಜಾಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ಕೊಟ್ಟಿದ್ದಾರೆ.
ಹರಿಯುವ ನೀರಿಗೆ ದೊಣ್ಣೆ ನಾಯಕನ ಅಪ್ಪಣೆ ಬೇಕೇ ಎಂಬ ಮಾತಿದೆ. ಗೃಹ ಸಚಿವ ಅಮಿತ್ ಶಾ ಮಂಗಳೂರಿಗೆ ಬಂದರೆ ಸಂಭ್ರಮ ಪಡಬೇಕು. ಪೌರತ್ವ (ತಿದ್ದುಪಡಿ) ಕಾಯ್ದೆ ಬಗ್ಗೆ ಮನವರಿಕೆ ಮಾಡಲು ಗೃಹಸಚಿವರೇ ಬರುತ್ತಿದ್ದಾರೆ. ಗೃಹಸಚಿವರು ಮನೆ ಬಾಗಿಲಿಗೆ ಬರುವಾಗ ಐವಾನ್ ಡಿಸೋಜ ಸಣ್ಣತನ ಪ್ರದರ್ಶಿಸದೆ ಸ್ವಾಗತಿಸಲಿ ಎಂದರು.