ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಭೇಟಿ ನೀಡಿದರು. ಕೇರಳದ ವಯನಾಡ್‌ನಿಂದ ಧರ್ಮಸ್ಥಳದ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಮೂಲಕ ಆಗಿಮಿಸಿದ ಅವರು ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ರಾಜ್ಯದೆಲ್ಲೆಡೆ ಹಮ್ಮಿಕೊಂಡ ಸೇವಾ ಕಾರ್ಯಗಳು ಹಾಗೂ ವಿಶೇಷವಾಗಿ ಕೆರೆಗಳ ಪುನಶ್ಚೇತನ ಕಾರ್ಯದ ಬಗ್ಗೆ ಹೆಗ್ಗಡೆಯವರು ಅವರಿಗೆ ಮಾಹಿತಿ ನೀಡಿದರು.