ಬಂಟ್ವಾಳ(ದಕ್ಷಿಣ ಕನ್ನಡ): ಜಿಲ್ಲೆಯ ಪುತ್ತೂರು ನಿವಾಸಿ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಕೆ.ಸಿ.ಅಶೋಕ್ ಶೆಟ್ಟಿ ಎಂಬುವರು ಸಂಸದೆ ಶೋಭಾ ಕರಂದ್ಲಾಜೆ ಅವರ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಟ್ವೀಟ್ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಸಂಸದರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋ ಕುರಿತು ಬಂದ ಟ್ವೀಟ್ ಉಲ್ಲೇಖಿಸಿರುವ ಅವರು, ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕರಾವಳಿಯಲ್ಲಿ ಕೋಮು ಸಾಮರಸ್ಯ ಕದಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.