ETV Bharat / state

ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್​ - Bantwal

ಹಿರಿಯ ಕಾಂಗ್ರೆಸ್ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ಮನೆಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್​ ಅವರ ಯೋಗ ಕ್ಷೇಮ ವಿಚಾರಿಸಿ, ಆಶೀರ್ವಾದ ಪಡೆದರು.

dhruvanarayan took blessings of Janardhana Poojary
ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್​
author img

By

Published : Mar 8, 2021, 7:12 AM IST

ಬಂಟ್ವಾಳ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.​ ಧ್ರುವನಾರಾಯಣ್ ಉಡುಪಿಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ ಬಂಟ್ವಾಳಕ್ಕೆ ತೆರಳಿ ತಮ್ಮ ರಾಜಕೀಯ ಗುರು, ಹಿರಿಯ ಕಾಂಗ್ರೆಸ್ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ಮನೆಗೆ ಭೇಟಿ ನೀಡಿ ಅವರ ಯೋಗ ಕ್ಷೇಮ ವಿಚಾರಿಸಿ, ಆಶೀರ್ವಾದ ಪಡೆದರು.

ಈ ಸಂದರ್ಭ ಧ್ರುವನಾರಾಯಣ್​ ಹಿಂದಿನ ರಾಜಕಾರಣದ ಕುರಿತು ಪೂಜಾರಿಯವರೊಂದಿಗೆ ಚರ್ಚಿಸಿ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದರು. ಅವರೊಂದಿಗೆ ಕಾಂಗ್ರೆಸ್ ಮುಖಂಡರುಗಳಾದ ಎಂ. ಎ. ಗಫೂರ್, ಪ್ರಸಾದ್ ರಾಜ್ ಕಾಂಚನ್ ಉಪಸ್ಥಿತರಿದ್ದರು.

ಜನಾರ್ದನ ಪೂಜಾರಿ ಬಂಟ್ವಾಳ ಮನೆಯಲ್ಲಿ ವಾಸಿಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷರಾದ ಕೂಡಲೇ ಡಿ.ಕೆ.ಶಿವಕುಮಾರ್ ಕೂಡ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.