ದಕ್ಷಿಣ ಕನ್ನಡ: ಕೆಎಸ್ಆರ್ಟಿಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ
ಮೃತ ಯುವಕನನ್ನು ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡ ಎಂಬವವರ ಪುತ್ರ ದಯೇಶ್ ಎಂದು ಗುರುತಿಸಲಾಗಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕಡಬ ಕಡೆಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬಳಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಯೇಶ್ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲೆೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಪ್ಪಿನಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.