ETV Bharat / state

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಣ್ಣುಕಾಯಿ ಅಂಗಡಿ ತೆರವು: ಮರು ಏಲಂ ನಡೆಸಲು ಹೈಕೋರ್ಟ್ ಆದೇಶ

HC orders re auction in Kukke: ಅಂಗಡಿ ಗುತ್ತಿಗೆದಾರರ ತಡೆಯಾಜ್ಞೆ ನೀಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್​ ತಿರಸ್ಕರಿಸಿದೆ.

Kukke Shri Subrahmanya Temple
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಣ್ಣುಕಾಯಿ ಅಂಗಡಿ
author img

By ETV Bharat Karnataka Team

Published : Sep 8, 2023, 4:54 PM IST

Updated : Sep 11, 2023, 5:44 PM IST

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ) : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿರುವ ಹಣ್ಣುಕಾಯಿ, ಚಿನ್ನ, ಬೆಳ್ಳಿಯ ಹರಕೆ ವಸ್ತುಗಳ ಮಾರಾಟದ ಅಂಗಡಿ, ಆದಿ ಸುಬ್ರಹ್ಮಣ್ಯ ದೇವಸ್ಥಾನದ ಹಣ್ಣುಕಾಯಿ ಅಂಗಡಿಗಳನ್ನು ಬಂದ್ ಮಾಡಲು ಆದೇಶವಾಗಿದ್ದು, ಮರು ಏಲಂ ನಡೆಸಲು ಹೈಕೋರ್ಟ್ ಆದೇಶ ನೀಡಿದೆ.

ಈ ಅಂಗಡಿಗಳನ್ನು ಕ್ರಮವಾಗಿ ಗುರುಪಾದ, ವಿಜಯ ಕುಮಾರ್ ಮತ್ತು ಕಾರ್ತಿಕ್ ಎಂಬವರು ಒಂದು ವರ್ಷದ ಅವಧಿಗೆ ಹರಾಜಿನಲ್ಲಿ ಪಡೆದುಕೊಂಡಿದ್ದರು. ಕರಾರುಪತ್ರದ ಅವಧಿಯು ಕಳೆದ ಏಪ್ರಿಲ್ ತಿಂಗಳಿನಲ್ಲಿ ಕೊನೆಗೊಂಡಿದ್ದರೂ, ಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮರು ಹರಾಜು ಪ್ರಕ್ರಿಯೆ ಸಾಧ್ಯವಾಗಿರಲಿಲ್ಲ.

ಈ ಮಧ್ಯೆ ಅಂಗಡಿಗಳನ್ನು ಮುಂದಿನ 4 ವರ್ಷದ ಅವಧಿಗೆ ಮುಂದುವರಿಸಿ ನೀಡಬೇಕೆಂದು ಗುತ್ತಿಗೆದಾರರು ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಮಾಸ್ಟರ್ ಪ್ಲ್ಯಾನ್ ಕಾಮಗಾರಿಗಳು ನಡೆಯಲಿರುವ ಕಾರಣ ಗುತ್ತಿಗೆ ಅವಧಿ ಮುಂದುವರೆಸಲು ಸಾಧ್ಯವಿಲ್ಲ ಎಂದು ಸರ್ಕಾರದ ಕಾರ್ಯದರ್ಶಿ ಹಿಂಬರಹ ನೀಡುವ ಮೂಲಕ ಗುತ್ತಿಗೆದಾರರ ಅರ್ಜಿಗಳನ್ನು ತಿರಸ್ಕರಿಸಿ ಆದೇಶ ನೀಡಿದ್ದರು. ಆದರೆ ಗುತ್ತಿಗೆದಾರರು ಸದ್ರಿ ಆದೇಶವನ್ನು ಪ್ರಶ್ನಿಸಿ ದೇವಸ್ಥಾನದ ವಿರುದ್ಧ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿ ತಡೆಯಾಜ್ಞೆ ಕೋರಿದ್ದರು.

ಇದೇ ವೇಳೆ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್​​​ನ ಗ್ರಾಮ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಸದ್ರಿ ಅಂಗಡಿಗಳನ್ನು ನಿಯಮ ಪ್ರಕಾರ ಏಲಂ ನಡೆಸಬೇಕು ಎಂದು ಕೋರಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿದ್ದರು. ಕೇವಲ ಹದಿನೈದು ದಿನಗಳಲ್ಲಿ ಸದ್ರಿ ಪ್ರಕರಣವನ್ನು ಇತ್ಯರ್ಥಪಡಿಸಿದ ಮಾನ್ಯ ನ್ಯಾಯಾಲಯ ಗುತ್ತಿಗೆದಾರರ ಅರ್ಜಿಗೆ ತಡೆಯಾಜ್ಞೆ ನೀಡಲು ನಿರಾಕರಿಸಿ ತಕ್ಷಣ ಅಂಗಡಿಗಳನ್ನು ತೆರವುಗೊಳಿಸಿ ಹರಾಜು ಪ್ರಕ್ರಿಯೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ ಅನಧಿಕೃತವಾಗಿ ವ್ಯಾಪಾರ ನಡೆಸಿದ ಮೂರೂವರೆ ತಿಂಗಳ ಬಾಡಿಗೆಗೆ ಶೇ 10 ರಂತೆ ದಂಡವನ್ನೂ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಇದನ್ನೂ ಓದಿ : ಸರ್ಕಾರಕ್ಕೆ ಹೆಚ್ಚು ಆದಾಯ ತಂದುಕೊಡುವ ರಾಜ್ಯದ ಪ್ರಮುಖ ದೇವಾಲಯಗಳು ಯಾವುವು ಗೊತ್ತೇ?

Last Updated : Sep 11, 2023, 5:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.