ETV Bharat / state

ಕುಕ್ಕೆಯಲ್ಲಿ ಭಕ್ತಿ ಸಡಗರದ ಲಕ್ಷದೀಪೋತ್ಸವ ಉತ್ಸವ... - ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವವು ಅದ್ಧೂರಿಯಾಗಿ ನೆರವೇರಿತು. ಶ್ರೀ ಕ್ಷೇತ್ರದಲ್ಲಿ ದೀಪಗಳ ಅಲಂಕಾರ ಭಕ್ತರ ಸಂಭ್ರಮ ಇಮ್ಮಡಿಗೊಳಿಸಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವ,Lakshadeepotsava in Kukke Subramanya
ಕುಕ್ಕೆಯಲ್ಲಿ ಭಕ್ತಿ ಸಡಗರದ ಲಕ್ಷದೀಪೋತ್ಸವ ಉತ್ಸವ
author img

By

Published : Dec 5, 2021, 3:31 AM IST

ಸುಬ್ರಹ್ಮಣ್ಯ: ಸಾಲು ಸಾಲು ಹಣತೆಗಳ ನಡುವೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವವು ಭಕ್ತಿ ಸಡಗರದಿಂದ ನೆರವೇರಿತು.

ಪಂಚ ಶಿಖರಗಳನ್ನೊಳಗೊಂಡ ಚಂದ್ರ ಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು. ಶ್ರೀ ದೇವಳದ ಅರ್ಚಕ ವೇದಮೂರ್ತಿ ರಾಜೇಶ್ ನಡ್ಯಂತ್ತಿಲ್ಲಾಯರು ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು.

ಕುಕ್ಕೆಯಲ್ಲಿ ಭಕ್ತಿ ಸಡಗರದ ಲಕ್ಷದೀಪೋತ್ಸವ ಉತ್ಸವ

ರಥಬೀದಿಯಿಂದ ಕಾಶಿಕಟ್ಟೆ ತನಕ ಬೆಳಗಿದ ಲಕ್ಷ ಹಣತೆ ದೀಪಗಳ ನಡುವೆ ಶ್ರೀ ದೇವರ ಉತ್ಸವ ಹಾಗೂ ಮೆರವಣಿಗೆ ನೆರವೇರಿತು. ದೀಪಾಲಂಕಾರಗಳ ನಡುವೆ ಭಕ್ತರ ಪರಾಕುಗಳೊಂದಿಗೆ ಶ್ರೀ ದೇವರ ಲಕ್ಷದೀಪೋತ್ಸವ ರಥೋತ್ಸವವು ನೆರವೇರಿತು. ಈ ಮೂಲಕ ಶ್ರೀ ದೇವರ ರಥಬೀದಿ ಉತ್ಸವ ಆರಂಭವಾಯಿತು. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ಲಕ್ಷ ಹಣತೆಗಳು ಬೆಳಗಿದವು. ಇದು ಉತ್ಸವಕ್ಕೆ ವಿನೂತನ ಕಳೆ ನೀಡಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವ,Lakshadeepotsava in Kukke Subramanya
ಕುಕ್ಕೆಯಲ್ಲಿ ಭಕ್ತಿ ಸಡಗರದ ಲಕ್ಷದೀಪೋತ್ಸವ ಉತ್ಸವ

ಶ್ರೀ ದೇವಳದ ಗೋಪುರದಿಂದ ಕಾಶಿಕಟ್ಟೆ, ಹನುಮಂತಗುಡಿ, ಸವಾರಿ ಮಂಟಪ, ಆದಿಸುಬ್ರಹ್ಮಣ್ಯ, ಬೈಪಾಸ್, ಕುಮಾರಧಾರ ಸೇರಿದಂತೆ ಕ್ಷೇತ್ರದಾದ್ಯಂತ ಹಣತೆಗಳು ಬೆಳಗಿದವು.

ಕುಣಿತ ಭಜನೆ ಹಾಗೂ ಭಜನೆ ಸಡಗರಕ್ಕೆ ಮೆರಗು ನೀಡಿತು. ಇದಕ್ಕೂ ಮೊದಲು ಆದಿ ಸುಬ್ರಹ್ಮಣ್ಯದಲ್ಲಿ ದೀಪಾಂಕೃತ ರಂಗಪೂಜೆ ನಡೆಯಿತು. ಆ ಬಳಿಕ ಪ್ರಧಾನ ದೇವಾಲಯದಲ್ಲಿ 16 ಮಡಿಕೆಗಳಲ್ಲಿ ಮಣ್ಣು ಮತ್ತು ಮರಳನ್ನು ಮಿಶ್ರ ಮಾಡಿ ನವಧಾನ್ಯಗಳನ್ನು ಬಿತ್ತುವ ಅಂಕುರಾರ್ಪಣೆ ಕಾರ್ಯ ನೆರವೇರಿತು. ಶ್ರೀ ದೇವರ ಹೊರಾಂಗಣ ಉತ್ಸವ, ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ ನೆರವೇರಿತು.

(ಇದನ್ನೂ ಓದಿ: ಕೊರೊನಾ ಶಮನಕ್ಕೆ ಮೂಡುಬಿದಿರೆ ಸಾವಿರಕಂಬ ಬಸದಿಯಲ್ಲಿ ಲಕ್ಷ ದೀಪೋತ್ಸವ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.