ಬಂಟ್ವಾಳ: ಶುಕ್ರವಾರ ರಾತ್ರಿಯಿಂದೀಚೆಗೆ ಸುರಿದ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ದಂಬೆದಾರ್ ಜಯಶೆಟ್ಟಿ ಅವರ ತೋಟದ ಬಳಿ ಹೊಳೆ ಬದಿ ತಡೆಗೋಡೆ ಕುಸಿದು ನೀರು ತೋಟಕ್ಕೆ ನುಗ್ಗಿ ಹಾನಿ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ಜಿ.ಪಂ ಸದಸ್ಯ ತುಂಗಪ್ಪ ಬಂಗೇರ, ತಹಸೀಲ್ದಾರ್ ರಶ್ಮಿ ಎಸ್.ಆರ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.