ಮಂಗಳೂರು: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಕ್ರೈಸ್ತ ಸಮಾಜದ ಪ್ರಮುಖರು ಇಂದು ನಗರದ ಸಂಘ ನಿಕೇತನದಲ್ಲಿ ನಡೆಯುವ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭಾಶಯ ಸಲ್ಲಿಸಿದ್ದಾರೆ.
ಪ್ರತೀ ವರ್ಷವೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಸದಸ್ಯರು ಸಂಘ ನಿಕೇತನದಲ್ಲಿ ನಡೆಯುವ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿ ಹಿಂದೂ ಬಾಂಧವರಿಗೆ ಶುಭಾಶಯ ಕೋರುತ್ತಾರೆ. ಅದೇ ರೀತಿ ಈ ಬಾರಿಯೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಸಂಸ್ಥಾಪಕ ಫ್ರ್ಯಾಂಕ್ಲಿನ್ ಮೊಂತೆರೊ ನೇತೃತ್ವದ ತಂಡ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ ಜಾತಿ ಮತ ಮೀರಿದ ಸಾಮರಸ್ಯ ಗಣೇಶೋತ್ಸವ ಕಾರ್ಯಕ್ರಮಕ್ಕೆ ನಾಂದಿ ಹಾಡಲಾಯಿತು.
ಈ ಸಂದರ್ಭ ಸಂಘ ನಿಕೇತನ ಗಣೇಶೋತ್ಸವ ಕಾರ್ಯಕ್ರಮ ಸಮಿತಿಯ ಸದಸ್ಯರು ಸ್ವಾಗತಿಸಿದರು.