ETV Bharat / state

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಕೋಟ ಶ್ರೀನಿವಾಸ ಪೂಜಾರಿ, ಡಿಎಸ್​ ಅರುಣ್ - ಮಂಗಳೂರಲ್ಲಿ ನಾಮಪತ್ರ ಸಲ್ಲಿಸಿದ ಕೋಟ ಶ್ರೀನಿವಾಸ ಪೂಜಾರಿ

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಫಿಕ್ಸ್​ ಆಗಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ..

Kota Srinivas poojary and DS Arun submitted nomination
ನಾಮಪತ್ರ ಸಲ್ಲಿಸಿದ ಕೋಟ ಶ್ರೀನಿವಾಸ ಪೂಜಾರಿ, ಡಿಎಸ್​ ಅರುಣ್
author img

By

Published : Nov 20, 2021, 4:07 PM IST

ಮಂಗಳೂರು : ವಿಧಾನ ಪರಿಷತ್ ಚುನಾವಣೆಗೆ(legislative council election) ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಸಚಿವಎಸ್‌.ಅಂಗಾರ, ಸುನಿಲ್‌ಕುಮಾರ್, ಶಾಸಕ ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಸೇರಿ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಆಗಮಿಸಿ ಜಿಲ್ಲಾಧಿಕಾರಿಯವರ ಸಮಕ್ಷಮದಲ್ಲಿ‌ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಕೋಟ ಶ್ರೀನಿವಾಸ ಪೂಜಾರಿ

ನಾಮಪತ್ರ ಸಲ್ಲಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೀಗ ತಾನೇ ನಾನು ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದೇನೆ. ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಪಕ್ಷದಿಂದ ಗೆದ್ದು ಬರುವ ವಿಶ್ವಾಸವಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು, ಶಾಸಕರು, ಸಚಿವರು ಒಗ್ಗೂಡಿ ದುಡಿದು ಈ ಚುನಾವಣೆ ಗೆಲ್ಲುವ ವಿಶ್ವಾಸ ಹೊಂದಿದ್ದೇನೆ ಎಂದರು.

ಬಿಜೆಪಿ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇನೆ : ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ( DS Arun)​ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಪ್ರಚಾರ ನಡೆಸುತ್ತೇವೆ ಎಂದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ಡಿಎಸ್​ ಅರುಣ್​

ಬಳಿಕ ಸಂಸದ ಬಿ.ವೈ.ರಾಘವೇಂದ್ರರವರು (MP BY Raghavendra) ಮಾತನಾಡಿ, ಪಕ್ಷ ಒಮ್ಮತದಿಂದ ಅರುಣ್ ಅವರನ್ನು ಕಣಕ್ಕೆ ಇಳಿಸಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಶೇ. 50ರಷ್ಟಿದ್ದಾರೆ. ನಮ್ಮ ಕಾರ್ಯಕರ್ತರನ್ನು ಗೆಲ್ಲಿಸಲಾಗಿದೆ. ಹೀಗಾಗಿ, ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮೊದಲ ಸುತ್ತಿನಲ್ಲಿಯೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.