ಬಂಟ್ವಾಳ: ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯನ್ನು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಿದ್ದರು. ಆದರೆ, ಪಿಲಿಕುಳಕ್ಕೆ ಹಸ್ತಾಂತರ ಮಾಡುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದೆ. ಅಲ್ಲಿಪಾದೆ ಸಮೀಪದ ದೇವಸ್ಯಪಡೂರು ಬೀಜಪ್ಪಾಡಿ ಎಂಬಲ್ಲಿ ಚಿರತೆ ಉರುಳಿಗೆ ಬಿದ್ದಿತ್ತು.
ಸುಮಾರು 6 ವರ್ಷದ ಗಂಡು ಚಿರತೆಯೊಂದು ಉರುಳಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ನೇತೃತ್ವದ ತಂಡ ರಾತ್ರಿ 9 ಗಂಟೆಯಿಂದ ಮುಂಜಾನೆ 4 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಚಿರತೆ ರಕ್ಷಣೆ ಮಾಡಿದ್ದಾರೆ. ರಕ್ಷಿಸಿದ ಚಿರತೆಯನ್ನು ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರಿಸಲು ತೆರಳುತ್ತಿದ್ದಾಗ ಮಾರ್ಗಮಧ್ಯೆ ಅನಾರೋಗ್ಯದಿಂದ ಮೃತಪಟ್ಟಿದೆ.
ಇದನ್ನೂ ಓದಿ: ಮೈಸೂರು ವಿವಿ ಘಟಿಕೋತ್ಸವ : ಪುನೀತ್ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ