ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 17 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುವುದು. ಆಯಾಯ ಗ್ರಾಮ ಅಥವಾ ತಾಲೂಕು ಪಂಚಾಯಿತಿ ನಿವಾಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ 17 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಿರುವ ಗ್ರಾಮಗಳ ಪಟ್ಟಿ ಇಂತಿದೆ. ಅತಿಕಾರಿ ಬೆಟ್ಟು ಇರುವೈಲ್, ಇರ್ವತ್ತೂರು, ಕಡಿರುದ್ಯಾವರ, ಕಡ್ಯ - ಕೊಣಾಜೆ, ಕೆಯ್ಯೂರು, ನಿಡ್ಪಳ್ಳಿ, ಬಡಗ ಎಡಪದವು, ಮಣಿನಾಲ್ಕೂರು, ಮಲ್ಲೂರು, ಮಾಣಿಲ, ವಾಲ್ಪಾಡಿ, ಸಜಿಪಪಡು, ಸಾಲೆತ್ತೂರು, ಸುಲ್ಕೇರಿ, ಮಾಣಿ
ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು.
ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುವುದು.
ವಿಶೇಷ ಸೂಚನೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಈ ಸಂಬಂದ ತಹಶೀಲ್ದಾರ್ ಅವರಿಂದ ವಾಸಸ್ಥಳ ಪ್ರಮಾಣ ಪತ್ರವನ್ನು ಪಡೆದು ಅರ್ಜಿ ಜೊತೆ ಸಲ್ಲಿಸಬೇಕು
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿ ಸಡಿಲಿಕೆ ನಡೆಸಲಾಗುವುದು. ಆಯ್ಕೆ: ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 200 ರೂ, ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ಪಾವತಿಸಬೇಕಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಕ್ಯೂ ಆರ್ ಕೋಡ್ ಅಥವಾ ಬ್ಯಾಂಕ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಅಭ್ಯರ್ಥಿಗಳು ಅಕ್ಟೋಬರ್ 16ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 6 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸವಿವರಕ್ಕೆ zpdk.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ 496 ಹುದ್ದೆಗಳಿಗೆ ನೇಮಕಾತಿ: ಪದವಿ ಆದವರಿಗೆ ಇದೆ ಭಾರಿ ಅವಕಾಶ