ETV Bharat / state

ಕೇರಳದಲ್ಲಿ COVID ಉಲ್ಬಣ: ದ.ಕ ಗಡಿಯಲ್ಲಿ ಮದ್ಯದಂಗಡಿಗಳಿಗೆ ಬೀಗ

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುವ ಭೀತಿ ಎದುರಾಗಿದ್ದು, ಈ ಹಿನ್ನೆಲೆ ಕೇರಳ ಗಡಿಗೆ ಹೊಂದಿಕೊಂಡಂತಿರುವ ಮದ್ಯದ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ.

liquor-shops-closed-in-dk-for-rise-of-covid-cases-in-kerala
ಕೇರಳದಲ್ಲಿ ಹೆಚ್ಚಾಯ್ತು ಕೊರೊನಾ
author img

By

Published : Aug 3, 2021, 6:06 PM IST

ಮಂಗಳೂರು: ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಗಡಿ ಭಾಗದಲ್ಲಿರುವ ಮದ್ಯದಂಗಡಿಗಳನ್ನು ಆಗಸ್ಟ್ 15ರ ವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಕೇರಳದಲ್ಲಿ ಕೊರೊನಾ ಪ್ರಕರಣ ತೀವ್ರವಾಗಿ ಹೆಚ್ಚಳವಾಗಿದ್ದು ಆರ್​​​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದೆ ಗಡಿಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಗಡಿಭಾಗದ ಜನತೆ ಮದ್ಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮದ್ಯದಂಗಡಿಗಳನ್ನು ಅವಲಂಬಿಸಿದ್ದಾರೆ. ಈ ಕಾರಣದಿಂದ ಗಡಿಭಾಗದಲ್ಲಿರುವ ಜಿಲ್ಲೆಯ 5 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ
ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ

ಮಂಗಳೂರು ತಾಲೂಕಿನ ಸೋಮೇಶ್ವರ, ಕಿನ್ಯ, ಕೋಟೆಕಾರ್, ಮಂಜನಾಡಿ, ಬಂಟ್ವಾಳ ತಾಲೂಕಿನ ಕೇಪು, ಕರೋಪಾಡಿ, ಪೆರುವಾಯಿ, ನರಿಂಗಾನ, ಕಂಬ್ಳಪದವು, ಮುಡಿಪು, ಪಜೀರ್, ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು, ಬಡಗನ್ನೂರು, ಪಾಣಾಜೆ, ಸುಳ್ಯ ತಾಲೂಕಿನ ಅಲೆಟ್ಟಿ, ಮಂಡೆಕೋಲು, ಜಾಲ್ಸೂರು ಮತ್ತು ಕನಕಮಜಲು ಗ್ರಾಮದಲ್ಲಿ ಇರುವ ಮದ್ಯದಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

ಓದಿ: ಮಹಾರಾಷ್ಟ್ರ,ಕೇರಳದಿಂದ ಬರುವವರಿಗೆ ಕೊರೊನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.