ETV Bharat / state

ನಾಳೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ದೇವರ ದರ್ಶನಕ್ಕಿಲ್ಲ ಅವಕಾಶ

ಭಾನುವಾರ ಲಾಕ್​ಡೌನ್ ಜಾರಿಯಲ್ಲಿರುವ ಹಿನ್ನೆಲೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಹೆಚ್. ತಿಳಿಸಿದ್ದಾರೆ.

Kukke subramanya temple
Kukke subramanya temple
author img

By

Published : Jul 4, 2020, 6:56 PM IST

ಸುಬ್ರಹ್ಮಣ್ಯ: ರಾಜ್ಯದಲ್ಲಿ ನಾಳೆ ಸಂಪೂರ್ಣ ಲಾಕ್​ಡೌನ್ ಜಾರಿಯಲ್ಲಿರುವ ಹಿನ್ನೆಲೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಹೆಚ್. ತಿಳಿಸಿದ್ದಾರೆ.

ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಸೇರ್ಪಡೆಗೊಳಿಸುವ ಮೂಲಕ ಜು. 5 ಭಾನುವಾರ ಸೇರಿದಂತೆ ಮುಂದಿನ ಆ. 2ರ ತನಕದ ಭಾನುವಾರಗಳಂದು ಸಂಪೂರ್ಣ ಲಾಕ್​ಡೌನ್ ಇರಲಿದೆ ಎಂದು ರಾಜ್ಯ ಸರ್ಕಾರದ ಸಚಿವಾಲಯದಿಂದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಪ್ರಕಟಣೆ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಜು. 5ರ ಭಾನುವಾರದಂದು ಪೂರ್ಣ ಲಾಕ್​ಡೌನ್ ಸಂಬಂಧಿಸಿದಂತೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.

ಮಾತ್ರವಲ್ಲದೆ ನಾಳೆ ಬೆಳಗ್ಗಿನಿಂದ ಜು. 6ರ ಬೆಳಗ್ಗಿನತನಕ ಕೆ.ಎಸ್.ಆರ್.ಟಿ.ಸಿ ಬಸ್​​ಗಳು ಕಾರ್ಯಾಚರಿಸುವುದಿಲ್ಲ ಎಂದು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.