ETV Bharat / state

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

lokayukta-arrested-village-accountant-for-taking-bribe-in-sulya
ಸುಳ್ಯ : ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ
author img

By

Published : Aug 19, 2023, 6:06 PM IST

ಸುಳ್ಯ (ದಕ್ಷಿಣ ಕನ್ನಡ): ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಸುಳ್ಯದ ಸಂಪಾಜೆ - ಅರಂತೋಡಿನಲ್ಲಿ ನಡೆದಿದೆ. ವ್ಯಕ್ತಿಯೊಬ್ಬರಿಂದ ಕಡತಕ್ಕೆ ಸಂಬಂಧಿಸಿದಂತೆ 5,000 ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಿದ್ದಾರೆ. ಮಿಯಾಸಾಹೇಬ್​ ಮುಲ್ಲಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.

ಸುಳ್ಯ ತಾಲೂಕಿನ ಅರಂತೋಡಿನ ಹರಿಪ್ರಸಾದ್ ಎಂಬವರು ತನ್ನ ತಂದೆಯ ಮರಣದ ನಂತರದಲ್ಲಿ ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಡತ ವಿಲೇವಾರಿಗಾಗಿ ಇಲ್ಲಿನ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಹೇಬ್ ಮುಲ್ಲಾ 8,000 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಗ್ರಾಮಲೆಕ್ಕಾಧಿಕಾರಿ ಈಗಾಗಲೇ ವ್ಯಕ್ತಿಯಿಂದ ಮೂರು ಸಾವಿರ ರೂಪಾಯಿಯನ್ನು ಪಡೆದಿದ್ದೂ, ಇಂದು ಉಳಿದ 5,000 ರೂಪಾಯಿ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪೊಲೀಸ್ ಅಧಿಕಾರಿಗಳು ಸುಳ್ಯ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯನ್ನು ವಿಚಾರಣೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ. ಜಿಲ್ಲಾ ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಚೆಲುವರಾಜ್, ಶ್ರೀಮತಿ ಕಲಾವತಿ, ಹಾಗೂ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಎರಡು ದಿನಗಳ ಹಿಂದೆ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಆಗಸ್ಟ್​ 17ರಂದು ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದರು. ಈ ವೇಳೆ ಅಧಿಕಾರಿಗಳ ಮನೆ ಮತ್ತು ಕಚೇರಿಯಲ್ಲಿ ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ ಪತ್ತೆಯಾಗಿತ್ತು.

ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 45ಕ್ಕೂ ಹೆಚ್ಚು ಕಡೆಗಳಲ್ಲಿ ಸುಮಾರು 250ಕ್ಕೂ ಅಧಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಬಂದ ದೂರುಗಳನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದರು.

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾ ಎಇಇ ಬಂಧನ : ವಿದ್ಯುತ್ ಸಂಪರ್ಕ ನೀಡಲು 13 ಲಕ್ಷ ರೂಪಾಯಿ ಲಂಚದ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಎಇಇ ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರು. ಬಂಧಿತರನ್ನು ಧನಂಜಯ ಎಂದು ಗುರುತಿಸಲಾಗಿತ್ತು. ಜಯನಗರದ ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಪಡೆಯಲು ಕಾಂಟ್ರಾಕ್ಟರ್​ಗಳಾದ ಶಂಕರ್ ಮತ್ತು ಗುರುದತ್ ಎಂಬವರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ವಿದ್ಯುತ್ ಸಂಪರ್ಕ ನೀಡಲು ಧನಂಜಯ ಅವರು ವ್ಯಕ್ತಿಯೊಬ್ಬನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತ ಇನ್ಸ್ಪೆಕ್ಟರ್ ವೆಂಕಟೇಶ ಮತ್ತು ವಿಜಯಕೃಷ್ಣ ತಂಡ ದಾಳಿ ನಡೆಸಿ ಬಂಧಿಸಿದೆ. ಮುಂಗಡವಾಗಿ 3.5 ಲಕ್ಷ ರೂ ಲಂಚ ಪಡೆಯುವಾಗ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ಇದನ್ನೂ ಓದಿ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.