ಮಂಗಳೂರು: ಕಡಬ ತಾಲೂಕು ಪಂಚಾಯತ್ ಕಛೇರಿಯಲ್ಲಿ ಶುಕ್ರವಾರ ನಡೆದ ಮಂಗಳೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ ನಡೆಯಿತು. ಈ ವೇಳೆ ಸುಮಾರು 15 ದೂರುಗಳು ಸಲ್ಲಿಕೆ ಆಗಿದೆ.
ಕಂದಾಯ, ತಾಲೂಕು, ಸರ್ವೆ, ಮೆಸ್ಕಾಂ, ಅರಣ್ಯ ಇಲಾಖೆ, ಪಂಚಾಯಿತಿ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ವಿರುದ್ದ ಹಲವಾರು ದೂರುಗಳನ್ನು ಸಾರ್ವಜನಿಕರು ಲೋಕಾಯುಕ್ತರಿಗೆ ನೀಡಿದ್ದಾರೆ. ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್ ಮತ್ತು ಲೋಕಾಯುಕ್ತ ಸಿಬ್ಬಂದಿಗಳು ದೂರುಗಳನ್ನು ಸ್ವೀಕರಿಸಿದರು.
ಇನ್ನು ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮಂಗಳೂರು ವಿಭಾಗದ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಪ್ರಸಾದ್, ಕಡಬ ತಾಲೂಕಿಗೆ ಸಂಬಂಧಪಟ್ಟಂತೆ ಹಲವಾರು ದೂರುಗಳು ಸಲ್ಲಿಕೆಯಾಗುತ್ತಿದ್ದು ಪ್ರತಿ ತಿಂಗಳೂ ಸಾರ್ವಜನಿಕರು ದೂರು ನೀಡಲು ಅವಕಾಶ ಕಲ್ಪಿಸಲಾಗುವುದು. ಸ್ಥಳದಲ್ಲೇ ಇತ್ಯರ್ಥಪಡಿಸುವ ದೂರುಗಳನ್ನು ಇತ್ಯರ್ಥಪಡಿಸುವಂತೆಯೂ, ಕೆಲವು ದೂರುಗಳ ಬಗ್ಗೆ ಅಧಿಕಾರಿಗಳಿಗೆ ವರದಿ ನೀಡುವಂತೆಯೂ ತಿಳಿಸಲಾಗಿದೆ. ಮತ್ತೆ ಕೆಲವು ದೂರುಗಳನ್ನು ನಮ್ಮ ಲೋಕಾಯುಕ್ತ ಇಲಾಖಾ ನಿಯಮಗಳ ಪ್ರಕಾರ ಸ್ವೀಕಾರ ಮಾಡಲಾಗಿದ್ದು, ತನಿಖೆ ನಡೆಸಿ ಪರಿಹಾರವನ್ನು ಕಲ್ಪಿಸಲಾಗುವುದು ಎಂದಿದ್ದಾರೆ.