ಬೆಳ್ತಂಗಡಿ(ದಕ್ಷಿಣ ಕನ್ನಡ): ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರುಳುಗಾರಿಕೆ ಮೇಲೆ ನಿನ್ನೆ ಲೋಕಯುಕ್ತ ಪೊಲೀಸರ ತಂಡ ದಾಳಿ ನಡೆಸಿ ಲಕ್ಷಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದೆ. ಬೆಳ್ತಂಗಡಿ, ಬಂಟ್ವಾಳ, ಮೂಡಬಿದಿರೆಯ ಮರುಳುಗಾರಿಕೆ ಮೇಲೆ ದಾಳಿಮಾಡಿದ ಪೊಲೀಸರು ಟಿಪ್ಪರ್, ದೋಣಿ ಸೇರಿದಂತೆ ಸುಮಾರು 40 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.
ಅಕ್ರಮ ಮರಳುಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದ್ದು, ಅಕ್ರಮ ಮರಳುಗಾರಿಕೆ ಬಗ್ಗೆ ತಿಳಿದು ಸುಮ್ಮನಿರುವ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಅಕ್ರಮ ಗಣಿಗಾರಿಕೆ ಹಾಗೂ ಮಿತಿಮೀರಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆಯೂ ಎಚ್ಚರ ವಹಿಸಿರುವ ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.
ಇದ್ನನೂ ಓದಿ: 1. 85 ಕೋಟಿ ಮೌಲ್ಯದ ಅಕ್ರಮ ಮರಳು ಸಾಗಾಣಿಕೆ: ಗಂಗಾವತಿಯಲ್ಲಿ 8 ಮಹಿಳೆಯರು 36 ರೈತರ ವಿರುದ್ಧ ದೂರು