ETV Bharat / state

ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ - ಅಪಾಯದಿಂದ ಪಾರಾದ ಚಾಲಕ - bantwala lorry accident news

ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಬುಡೋಳಿ ಎಂಬಲ್ಲಿ ಹಾದು ಹೋಗುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬಿಣದ ರಾಡ್ ಸಾಗಾಟದ ಲಾರಿಯೊಂದು ಪಲ್ಟಿಯಾಗಿ ಕೆಲ ಕಾಲ ಆತಂಕ ಮೂಡಿಸಿತ್ತು.

lorry overturned at bantwala
ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ - ಅಪಾಯದಿಂದ ಪಾರಾದ ಚಾಲಕ
author img

By

Published : Mar 12, 2021, 11:58 AM IST

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ ಚಾಲಕ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಕಬ್ಬಿಣದ ರಾಡ್​​​ಗಳನ್ನು ತುಂಬಿಸಿಕೊಂಡು ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಕಾರಿಗೆ ಲಾರಿ ಡಿಕ್ಕಿ: ಶಿವರಾತ್ರಿಯಂದೇ ಸಾವಿನ ಮನೆ ಸೇರಿದ ಮೂವರು

ಘಟನೆಯಲ್ಲಿ ಕಬ್ಬಿಣದ ರಾಡ್​ಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆಲ ಕಾಲ ಈ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ಲಾರಿಯ ತೆರವು ಕಾರ್ಯ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.