ETV Bharat / state

ಜಾನುವಾರುಗಳಲ್ಲಿ ಲಂಪಿ ಚರ್ಮ ಗಂಟು ರೋಗ: ತಕ್ಷಣ ಪಶುವೈದ್ಯರನ್ನು ಸಂಪರ್ಕಿಸಲು ಸೂಚನೆ

ಜಾನುವಾರುಗಳಲ್ಲಿ ಲಂಪಿ ಚರ್ಮ ಗಂಟುರೋಗ ಬಂದರೆ ತಕ್ಷಣವೇ ಪಶುವೈದ್ಯಕೀಯ ಸಂಸ್ಥೆಯ ಪಶು ವೈದ್ಯರನ್ನು ಸಂಪರ್ಕಿಸಲು ದ.ಕ.ಜಿಲ್ಲೆಯ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಸೂಚಿಸಿದ್ದಾರೆ.

cattle
ಹಸು
author img

By

Published : Sep 5, 2020, 9:30 PM IST

ಮಂಗಳೂರು: ಜಾನುವಾರುಗಳಲ್ಲಿ ಲಂಪಿ ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬಂದಲ್ಲಿ ರೈತರು ಯಾವುದೇ ಭಯ ಪಡದೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯ ಪಶುವೈದ್ಯರನ್ನು ಅಥವಾ ಸಿಬ್ಬಂದಿಯನ್ನು ಸಂಪರ್ಕಿಸಬೇಕು ಎಂದು ದ.ಕ. ಜಿಲ್ಲೆಯ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ (ಆಡಳಿತ) ಪ್ರಕಟಣೆ ತಿಳಿಸಿದೆ.

ಲಂಪಿ ಚರ್ಮ ಗಂಟು ರೋಗ ಜಾನುವಾರುಗಳಲ್ಲಿ ಕಂಡುಬರುವ ಒಂದು ವೈರಸ್ ಕಾಯಿಲೆಯಾಗಿದ್ದು, ಇದು ಸೊಳ್ಳೆ, ನೊಣ ಹಾಗೂ ಉನುಗುಗಳ ಮೂಲಕ ಜಾನುವಾರುಗಳಿಗೆ ಹರಡುತ್ತದೆ. ರಾಜ್ಯದ ಉತ್ತರ ಕರ್ನಾಟಕದ ಭಾಗಗಳಲ್ಲಿ ಈ ರೋಗವು ಕಂಡು ಬಂದಿದ್ದು, ಇತ್ತೀಚೆಗೆ ಉಡುಪಿ ಜಿಲ್ಲೆಯ ಕೆಲ ಭಾಗಗಳಲ್ಲಿ ಕಾಣಿಸಿಕೊಂಡಿದೆ. ಆದರೆ ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಜಾನುವಾರುಗಳಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಒಂದು ವೇಳೆ ಜಾನುವಾರುಗಳಲ್ಲಿ ಈ ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣ ಪಶು ವೈದ್ಯರನ್ನು ಸಂಪರ್ಕಿಸಬೇಕು ಎಂದು ತಿಳಿಸಿದೆ.

ಈ ರೋಗ ಕಂಡು ಬಂದಲ್ಲಿ ಜಾನುವಾರಿಗೆ ಜ್ವರ, ಮೈಮೇಲೆ ಗುಳ್ಳೆ, ಮುಂಗಾಲು ಬಾವು, ಎದೆ ಬಾವು, ಕೆಚ್ಚಲಲ್ಲಿ ಗುಳ್ಳೆ ಕಾಣಿಸಿಕೊಳ್ಳುತ್ತದೆ. ಜಾನುವಾರುಗಳು ಮಂಕಾಗಿ ಮೇವು ತಿನ್ನುವುದನ್ನು ಕಡಿಮೆ ಮಾಡುತ್ತವೆ. ಬಹು ಮುಖ್ಯವಾಗಿ ಈ ರೋಗವು ಮನುಷ್ಯರಿಗೆ ಹರಡುವುದಿಲ್ಲ. ಚರ್ಮಗಂಟು ರೋಗ ಕಂಡುಬಂದ ಜಾನುವಾರುಗಳನ್ನು ಇತರೆ ಜಾನುವಾರುಗಳಿಂದ ಪ್ರತ್ಯೇಕಿಸುವುದರಿಂದ ಇತರೆ ಜಾನುವಾರುಗಳಿಗೆ ರೋಗ ಹರಡದಂತೆ ತಡೆಗಟ್ಟಬಹುದು.

ಯಾವುದೇ ಕಾರಣಕ್ಕೂ ರೋಗ ಬಂದ ಜಾನುವಾರುಗಳನ್ನು ಕೃಷಿ ಕೆಲಸಕ್ಕೆ ಬಳಸದೆ 8 ರಿಂದ 10 ದಿನಗಳ ಕಾಲ ವಿಶ್ರಾಂತಿ ನೀಡಿ ಚಿಕಿತ್ಸೆಯನ್ನು ನೀಡಬೇಕು. ಕೊಟ್ಟಿಗೆಯಲ್ಲಿ ಶುಚಿತ್ವವನ್ನು ಕಾಪಾಡುವುದು ಅತೀ ಮುಖ್ಯವಾಗಿರುತ್ತದೆ. ಕೊಟ್ಟಿಗೆಯ ಸುತ್ತ ಮುತ್ತ ನೊಣ, ಸೊಳ್ಳೆಗಳ ಹಾವಳಿಯನ್ನು ನಿಯಂತ್ರಿಸಲು ಕ್ರಮಕೈಗೊಳ್ಳಬೇಕು. ಜಾನುವಾರುಗಳಿಗೆ ಪೌಷ್ಠಿಕ ಆಹಾರ, ನೀರು ನೀಡಬೇಕು. ಜಾನುವಾರುಗಳ ಮೇಲ್ಮೈಯ ಮೇಲೆ ನೀಲಗಿರಿ ಎಣ್ಣೆ ಅಥವಾ ಬೇವಿನ ಎಣ್ಣೆ ಅಥವಾ ಸೊಳ್ಳೆ, ನೊಣ ನಿವಾರಕ ಮುಲಾಮು ಹಚ್ಚಬೇಕು. ಸೂಕ್ತ ಸಮಯದಲ್ಲಿ ಜಾನುವಾರುಗಳಿಗೆ ಚಿಕಿತ್ಸೆ ನೀಡುವುದರ ಮೂಲಕ ಹಾಗೂ ಅಗತ್ಯವಿರುವ ಮುನ್ನೆಚ್ಚರಿಕೆಯನ್ನು ಕೈಗೊಳ್ಳುವುದರ ಮೂಲಕ ರೋಗವನ್ನು ನಿಯಂತ್ರಿಸಬಹುದಾಗಿದೆ.

ರೋಗವನ್ನು ನಿಯಂತ್ರಿಸಲು ಪಶುಪಾಲನಾ ಇಲಾಖೆಯ ಎಲ್ಲಾ ಪಶುವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸನ್ನದ್ಧರಾಗಿದ್ದು, ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ದ.ಕ.ಜಿಲ್ಲೆಯ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ(ಆಡಳಿತ) ಪ್ರಕಟಣೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.