ETV Bharat / state

ಮಂಗಳೂರು ಗೋಲಿಬಾರ್: ಮ್ಯಾಜಿಸ್ಟೀರಿಯಲ್ ವಿಚಾರಣೆಯಲ್ಲಿ ದಾಖಲೆ, ಲಿಖಿತ ಹೇಳಿಕೆ ಸಲ್ಲಿಸಿದ ಉಪ ಪೊಲೀಸ್ ಆಯುಕ್ತ - ಮಂಗಳೂರು ಗೋಲಿಬಾರ್ ಪ್ರಕರಣ ತನಿಖೆ

ಮಂಗಳೂರಲ್ಲಿ ನಡೆದ ಗೋಲಿಬಾರ್ ಪ್ರಕರಣದ ಮ್ಯಾಜಿಸ್ಟೀರಿಯಲ್ ವಿಚಾರಣೆಗೆ 30 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆಗೆ ಹಾಜರಾಗಿದ್ದರು. ಮಾ.12ರಂದು ಮತ್ತೆ ವಿಚಾರಣೆ ನಡೆಯಲಿದ್ದು, ಆ ದಿನ ಪೊಲೀಸ್ ಕಮಿಷನರ್ ಸೇರಿದಂತೆ ಹಲವರು ವಿಚಾರಣೆಗೆ ಹಾಜರಾಗಲಿದ್ದಾರೆ

ಮ್ಯಾಜಿಸ್ಟೀರಿಯಲ್ ತನಿಖಾಧಿಕಾರಿ ಜಿ.ಜಗದೀಶ್
Magisterial Investigator G.Jagadeesh
author img

By

Published : Mar 9, 2020, 7:19 PM IST

ಮಂಗಳೂರು: ನಗರದಲ್ಲಿ ನಡೆದ ಗೋಲಿಬಾರ್ ಪ್ರಕರಣದ ಮ್ಯಾಜಿಸ್ಟೀರಿಯಲ್ ವಿಚಾರಣೆ ಇಂದು ಹಂಪನಕಟ್ಟೆಯಲ್ಲಿರುವ ಮಿನಿ ವಿಧಾನಸೌಧದ ಉಪ‌ ವಿಭಾಗಾಧಿಕಾರಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು.

ಈ ಕುರಿತು ಮ್ಯಾಜಿಸ್ಟೀರಿಯಲ್ ತನಿಖಾಧಿಕಾರಿ ಜಿ.ಜಗದೀಶ್ ಮಾತನಾಡಿ, ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ) ಅರುಣಾಂಶು ಗಿರಿ ವಿಚಾರಣೆಗೆ ಹಾಜರಾಗಿ ಗೋಲಿಬಾರ್​ಗೆ ಸಂಬಂಧಿಸಿದ 38 ದಾಖಲೆಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭ ಲಿಖಿತ ಹೇಳಿಕೆ, ದಾಖಲೆಗಳನ್ನು ನೀಡಿದ್ದಾರೆ.

ಡಿ.19ರಂದು ಸಿಎಎ ಕಾಯ್ದೆ ವಿರೋಧಿಸಿ ಅನುಮತಿ ಇಲ್ಲದೆ ಪ್ರತಿಭಟನೆಗೆ ಯತ್ನಿಸಿದ್ದರು. ಪ್ರತಿಭಟನಾಕಾರರನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದೇವು. ಆದರೆ ಈ ಸಂದರ್ಭ ಪ್ರತಿಭಟನೆಗೆ ಸೇರಿದ್ದ ಜನರು ಗಲಭೆಗೆ ಇಳಿದರು. ಮಾರಕಾಸ್ತ್ರಗಳೊಂದಿಗೆ ಪೊಲೀಸರ ಮೇಲೆ ದಾಳಿ ನಡೆಸಿದರು. ಪರಿಣಾಮ 78 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಗಾಯಗೊಂಡಿದ್ದರು. ಪರಿಸ್ಥಿತಿ ನಿಯಂತ್ರಿಸಲು ಅನಿವಾರ್ಯವಾಗಿ ಗುಂಡು ಹಾರಿಸಬೇಕಾಯಿತು ಎಂದು ತಿಳಿಸಿದ್ದಾರೆ ಎಂದರು.

ವಿಚಾರಣೆಗೆ 30 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆಗೆ ಹಾಜರಾಗಿದ್ದರು. ಮಾ.12ರಂದು ಮತ್ತೆ ವಿಚಾರಣೆ ನಡೆಯಲಿದ್ದು, ಆ ದಿನ ಪೊಲೀಸ್ ಕಮಿಷನರ್ ಸೇರಿದಂತೆ ಹಲವರು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಜಗದೀಶ್ ಹೇಳಿದರು.

ವಿಚಾರಣಾಧಿಕಾರಿ ಎದುರು ಹಾಜರಾದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಘಟನೆಗೆ ಸಂಬಂಧಿಸಿದಂತೆ ಲಿಖಿತ ಹೇಳಿಕೆ ಸಲ್ಲಿಸಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಸಮಸ್ತ ಕೇರಳ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಕೆ​ಎಸ್ಎಸ್ಎಫ್) ವತಿಯಿಂದ ‌ಪ್ರತಿಭಟನೆ ಆಯೋಜಿಸಲಾಗಿತ್ತು. ಆದರೆ ಪೊಲೀಸರು ಅನುಮತಿ‌ ನಿರಾಕರಿಸಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಗಿತ್ತು. ಈ ಸಂಬಂಧ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿತ್ತು. ಡಿ.19ರ ಗಲಭೆಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿದು ಬಂದಿದೆ.

ಗಲಭೆಯ ಬಳಿಕ ಕೆಲವರು ನನ್ನನ್ನು ದ್ವೇಷಿಸುತ್ತಿದ್ದಾರೆ. ನನ್ನ ಕೊಲೆಗೂ ಯತ್ನಗಳು ನಡೆದಿವೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ವಿಚಾರಣಾಧಿಕಾರಿ ಎದುರು ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.