ETV Bharat / state

ಕುಕ್ಕೆ ಕ್ಷೇತ್ರದ ಜಮೀನು ಲೀಸ್​ ನೀಡುವುದಕ್ಕೆ ಮಹೇಶ್ ಕರಿಕ್ಕಳ ಆಕ್ಷೇಪ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಎಲ್ಲಾ ಜಮೀನುಗಳು ದೇವಸ್ಥಾನಕ್ಕೆ ಅವಶ್ಯಕತೆ ಇದೆ. ಹಾಗಾಗಿ ಖಾಸಗಿಯವರಿಗೆ ಲೀಸ್​ ಕೊಡುವುದಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Mahesh karaikal
ಮಹೇಶ್ ಕರಿಕ್ಕಳ
author img

By

Published : Aug 31, 2020, 4:42 PM IST

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಯಾವುದೇ ಭೂಮಿಯನ್ನು ಸಂಸ್ಥೆಗೆ ಅಥವಾ ಖಾಸಗಿಯವರಿಗೆ ಲೀಸ್​ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಎಲ್ಲಾ ಜಮೀನುಗಳು ದೇವಸ್ಥಾನಕ್ಕೆ ಅವಶ್ಯಕತೆ ಇದೆ. ಸದರಿ ದೇಗುಲದ ಜಮೀನುಗಳನ್ನು ಯಾವುದೇ ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಗೆ ಲೀಸಿಗೆ ನೀಡಿದ್ದಲ್ಲಿ ಅದರಿಂದ ದೇವಸ್ಥಾನದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ. ಇಂತಹ ಯಾವುದೇ ಪ್ರಸ್ತಾವನೆಗಳು ಇದ್ದಲ್ಲಿ ಕೂಡಲೇ ಅದನ್ನು ತಿರಸ್ಕರಿಸಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ವತಿಯಿಂದ ದೇವಳದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಹೆಚ್‌ ಅವರಿಗೆ ಮನವಿ ಸಲ್ಲಿಸಲಾಗಿದೆ.

ಈ ವೇಳೆ ಶ್ರೀನಾಥ್ ಭಟ್, ಪ್ರಶಾಂತ್ ಮಾಣಿಲ, ಗುರುಪ್ರಸಾದ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.