ಬೆಳ್ತಂಗಡಿ(ದಕ್ಷಿಣ ಕನ್ನಡ): ತಾಲೂಕಿನ ಮಾಲಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾಲಾಡಿ ಗ್ರಾಮ ಪಂಚಾಯತ್ ಕಚೇರಿಯೊಳಗೆ ಪಿಡಿಒ ರವಿ ಎಂಬುವವರು ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸೆರೆ ಸಿಕ್ಕಿ ಬಿದ್ದಿದ್ದಾರೆ.
ವ್ಯಕ್ತಿಯೊಬ್ಬರಿಗೆ ಜಮೀನಿನ ಪಹಣಿ ಮಾಡಿಕೊಡಲು 15,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಭ್ರಷ್ಟಾಚಾರ ನಿಗ್ರಹ ದಳ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಇದನ್ನೂ ಓದಿ: ರಾತ್ರಿ ವೇಳೆ ಸಿಗದ ವೈದ್ಯರು: ಆ್ಯಂಬುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಗ್ರಾಮ ಪಂಚಾಯತ್ ಪಿಡಿಒ ರವಿ ಅವರನ್ನು ವಶಕ್ಕೆ ಪಡೆದು ಹೆಚ್ವಿನ ವಿಚಾರಣೆ ನಡೆಸಲಾಗುತ್ತಿದೆ.