ETV Bharat / state

ಕಸ್ತೂರಿ ರಂಗನ್ ವರದಿ ಜಾರಿಗೆ ಮಲೆನಾಡು ಹಿತರಕ್ಷಣಾ ವೇದಿಕೆ ವಿರೋಧ - ಈಟಿವಿ ಭಾರತ ಕನ್ನಡ

ಸೂಕ್ಷ್ಮ ವಲಯ ಗುರುತಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಕೇಂದ್ರ ಪರಿಸರ ಇಲಾಖೆಯು ಐದನೇ ಅಧಿಸೂಚನೆ ಹೊರಡಿಸಿದೆ. ಇದಕ್ಕೆ ಮಲೆನಾಡು ಹಿತರಕ್ಷಣಾ ವೇದಿಕೆ ವಿರೋಧ ವ್ಯಕ್ತಪಡಿಸಿದೆ.

Malenadu hitarakshana Forum opposes to implementation of Kasturi Rangan report
ಕಸ್ತೂರಿ ರಂಗನ್ ವರದಿ ಜಾರಿಗೆ ಮಲೆನಾಡು ಹಿತರಕ್ಷಣಾ ವೇದಿಕೆ ವಿರೋಧ
author img

By

Published : Jul 23, 2022, 4:06 PM IST

ಸುಳ್ಯ(ದಕ್ಷಿಣ ಕನ್ನಡ): ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ, ಕೇಂದ್ರ ಪರಿಸರ ಇಲಾಖೆಯು ಐದನೇ ಅಧಿಸೂಚನೆ ಹೊರಡಿಸಿದೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.

ಕಸ್ತೂರಿ ರಂಗನ್ ವರದಿಯ ಆಧಾರದಲ್ಲಿ ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ, ಇದಕ್ಕೆ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಈ ಆದೇಶವನ್ನು ಅಥವಾ ಅಧಿಸೂಚನೆ ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ವಾಸಿಸುವ ಜನರ ಜೀವನವೇ ಅಸ್ತವ್ಯಸ್ತವಾಗುವ ಆತಂಕ ಇಲ್ಲಿನ ಜನರಿಗೆ ಎದುರಾಗಿದೆ.

2010ರಲ್ಲಿ ಕೇಂದ್ರ ಸರ್ಕಾರಕ್ಕೆ ಗಾಡ್ಗಿಳ್ ವರದಿ ಸಲ್ಲಿಕೆಯಾಗಿತ್ತು. ಈ ವರದಿ ಅವೈಜ್ಞಾನಿಕವಾಗಿದೆ ಎಂದು ಇಸ್ರೋ ವಿಜ್ಞಾನಿಯಾಗಿದ್ದ ಕಸ್ತೂರಿ ರಂಗನ್ ನೇತೃತ್ವದಲ್ಲಿ ಇನ್ನೊಂದು ಸಮಿತಿ ರಚನೆ ಮಾಡಲಾಗಿತ್ತು. ಈ ಕಸ್ತೂರಿ ರಂಗನ್ ಸಮಿತಿಯು ಈ ಪ್ರದೇಶಗಳ ಬಗ್ಗೆ ಅಧ್ಯಯನ ಮಾಡಿ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲು ಕೇಂದ್ರಕ್ಕೆ ವರದಿ ನೀಡಿತ್ತು.

ಸೂಕ್ಷ್ಮ ವಲಯ: ಅದರಂತೆ ಗುಜರಾತ್ ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ಕನ್ಯಾಕುಮಾರಿವರೆಗೂ ಈ ಸೂಕ್ಷ್ಮ ವಲಯ ಹಬ್ಬಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64,280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 59.940 ಚ.ಕಿ.ಮೀ ವಿಸ್ತೀರ್ಣ ಪ್ರದೇಶ ಅಂದರೆ ಸುಮಾರು ಶೇಕಡಾ 36.49ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಅದರಂತೆ ಕರ್ನಾಟಕದ ಸುಮಾರು 20,668 ಚದರ ಕಿ.ಮೀ ಪ್ರದೇಶ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಒಳಪಡುತ್ತದೆ ಎಂದು ತಿಳಿದು ಬಂದಿದೆ.

ಸೂಕ್ಷ್ಮ ವಲಯ ವ್ಯಾಪ್ತಿಗೆ ಬರುವ ಜಿಲ್ಲೆಯ ಪ್ರದೇಶ: ಸುಳ್ಯ ತಾಲೂಕಿನ ನಾಲ್ಕೂರು, ಕೂತ್ಕುಂಜ, ದೇವಚಳ್ಳ, ಹರಿಹರಪಲ್ಲತಡ್ಕ, ಬಾಳುಗೋಡು, ಮಡಪ್ಪಾಡಿ, ಉಬರಡ್ಕ ಮಿತ್ತೂರು, ಕಲ್ಮಕಾರು, ಅರಂತೋಡು, ಅಲೆಟ್ಟಿ, ಸಂಪಾಜೆ, ತೊಡಿಕಾನ ಗ್ರಾಮಗಳು ಕಸ್ತೂರಿ ರಂಗನ್ ವರದಿಯಲ್ಲಿವೆ. ಇನ್ನು ಕಡಬ ತಾಲೂಕಿನ ಕೌಕ್ರಾಡಿ ಗೋಳಿತೊಟ್ಟು, ಶಿರಾಡಿ, ಅಲಂತಾಯ, ಸಿರಿಬಾಗಿಲು, ಬಲ್ಯ, ಕೊಂಬಾರು, ಬಿಳಿನೆಲೆ, ದೊಳ್ಪಾಡಿ, ಬಳ್ಪ, ಏನೆಕಲ್ಲು, ಸುಬ್ರಮಣ್ಯ, ಐನೆಕಿದು ಗ್ರಾಮಗಳು ಮತ್ತು ಬೆಳ್ತಂಗಡಿ ತಾಲೂಕಿನ ನಾರಾವಿ, ಮಲವಂತಿಗೆ, ಕುತ್ಲೂರು, ಸುಲ್ಕೇರಿಮೊಗ್ರು, ಶಿರ್ಲಾಲು, ನಾವರಾ, ಸವಣಾಲು, ಚಾರ್ಮಾಡಿ, ಸುಲ್ಕೇರಿ, ನಾವೂರು, ನೆರಿಯ, ನಾಡ, ಪುದುವೆಟ್ಟು, ಶಿಶಿಲ, ಕಳೆಂಜಾ, ಶಿಬಾಜೆ, ರೆಖ್ಯಾ ಗ್ರಾಮಗಳು ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಬರಲಿದೆ.

ಇದನ್ನೂ ಓದಿ: ರಾಜ್ಯ ಒಳ್ಳೆಯದಾಗಬೇಕೆಂದ್ರೆ ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ಜನರ ಬಯಕೆ: ಜಮೀರ್ ಪುನರುಚ್ಛಾರ

ಕಸ್ತೂರಿ ರಂಗನ್ ವರದಿಯು ಅನುಷ್ಠಾನಗೊಂಡರೆ, ಈ ಗ್ರಾಮಗಳ ಜನರ, ಇಲ್ಲಿನ ಅಭಿವೃದ್ಧಿಗಳಿಗೆ ಹಿನ್ನಡೆ ಆಗುವ ಅಪಾಯವಿದೆ ಎನ್ನಲಾಗಿದೆ. ಈ ವರದಿ ಅನುಷ್ಠಾನವಾದಲ್ಲಿ ಹೆಚ್ಚು ಬಾಧಿಸುವ ಕರಾವಳಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಚಿವ ಎಸ್.ಅಂಗಾರ ಅವರನ್ನು ಮಾತನಾಡಿಸಲು ಪ್ರಯತ್ನ ಮಾಡಿದರೂ ಸಚಿವರು ಯಾವುದೇ ಹೇಳಿಕೆ ನೀಡಿಲ್ಲ. ಯಾವುದೇ ಕಾರಣಕ್ಕೂ ವರದಿ ಅನುಷ್ಠಾನ ಮಾಡಲು ಬಿಡಲ್ಲ ಎಂಬುದಾಗಿ ಮಲೆನಾಡು ಹಿತರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.