ಮಂಗಳೂರು: ಪ್ರಾರ್ಥನಾ ಮಂದಿರದಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ (26) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.
ಏ.28ರಂದು ಮಂಗಳೂರಿನ ತೊಕ್ಕೊಟ್ಟುವಿನ ಪ್ರಾರ್ಥನಾ ಮಂದಿರಕ್ಕೆ ತೆರಳಿದ್ದ ಆರೋಪಿ, ಅಲ್ಲಿದ್ದ ಮಹಿಳೆಯರನ್ನು ಎಳೆದಾಡಿ ಅನುಚಿತ ವರ್ತನೆ ತೋರಿದ್ದ. ಪ್ರಾರ್ಥನಾ ಮಂದಿರದಲ್ಲಿ ನಡೆಯುತ್ತಿದ್ದ ವಿಶೇಷ ಕಾರ್ಯಕ್ರಮಕ್ಕೆ ಮಹಿಳೆಯರು ಆಗಮಿಸಿದ್ದರು. ಈ ವೇಳೆ ಆರೋಪಿ ಸುಜಿತ್ ಅಕ್ರಮವಾಗಿ ಪ್ರವೇಶಿಸಿ, ಮಹಿಳೆಯರನ್ನು ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದ ಎಂದು ದೂರಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಯುವತಿ ಮೇಲೆ ಆ್ಯಸಿಡ್ ದಾಳಿ: ಪಾಗಲ್ ಪ್ರೇಮಿಯ ಪೋಷಕರು ಪೊಲೀಸ್ ವಶಕ್ಕೆ