ಮಂಗಳೂರು: ಪಿಲಿಕುಳ ನಿಸರ್ಗಧಾಮದ ಪ್ರಾಣಿ ಸಂಗ್ರಹಾಲಯದ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಶೋಕ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಅಶೋಕ ಸುಮಾರು 6 ವರ್ಷಗಳಿಂದ ಪಿಲಿಕುಳ ಪ್ರಾಣಿ ಸಂಗ್ರಹಾಲಯದಲ್ಲಿ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಪಿಲಿಕುಳದ ತನ್ನ ಕ್ವಾರ್ಟರ್ಸ್ನ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಗೆ ಕಾರಣ ತಿಳಿದುಬಂದಿಲ್ಲ.
ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.