ನೆಲ್ಯಾಡಿ(ದಕ್ಷಿಣ ಕನ್ನಡ): ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ಉದನೆ ಗುಂಡ್ಯ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉದನೆ ನಿವಾಸಿ, ಕೊಣಾಜೆ ಗ್ರಾಮ ಪಂಚಾಯತ್ನ ಮಾಜಿ ಸದಸ್ಯ ಜೇಕಬ್ (58 )ಮೃತರು. ಜೇಕಬ್ ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಗಿದ್ದು, ಆಸ್ಪತ್ರೆಗೆ ಜಿ.ಪಂ ಸದಸ್ಯರಾದ ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ ಸೇರಿದಂತೆ ಹಲವ ಭೇಟಿ ನೀಡಿದ್ದರು.