ETV Bharat / state

ಸುಳ್ಯ: ಕಟ್ಟಡದ ಗೋಡೆ ಕುಸಿದು ವ್ಯಾಪಾರಿ ಸಾವು

author img

By

Published : Nov 5, 2021, 3:45 PM IST

ಕಳೆದ ವರ್ಷ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ವ್ಯವಹಾರ ಸ್ಥಗಿತಗೊಂಡಿತ್ತು. ಹೀಗಾಗಿ, ಇಲ್ಲಿನ ಕಬ್ಬಿಣ ಸಾಮಗ್ರಿಗಳನ್ನು ಅವರು ಸಂಗ್ರಹಿಸುತ್ತಿದ್ದರು. ಇಂದು ಬೆಳಗ್ಗೆ ತಮ್ಮ ಕೆಲಸದಾಳುಗಳ ಜೊತೆ ಕಬ್ಬಿಣದ ವಸ್ತುಗಳನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಗೋಡೆ ಮೈಮೇಲೆ ಕುಸಿದು ಬಿದ್ದಿದೆ.

Malnadu Cashew Factory
ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿ

ಸುಳ್ಯ: ಹಳೆ ಕಟ್ಟಡದ ಗೋಡೆ ಮಗುಚಿ ಬಿದ್ದ ಪರಿಣಾಮ ವ್ಯಾಪಾರಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಇಲ್ಲಿನ ಗಾಂಧಿನಗರ ಎಂಬಲ್ಲಿ ನಡೆದಿದೆ.

Malnadu Cashew Factory wall collapse
ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿ ಗೋಡೆ ಕುಸಿತ

ಇಲ್ಲಿನ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದಿದೆ. ಪರಿಣಾಮ, ಅಬ್ದುಲ್ ಖಾದರ್ ಎಂಬ ವ್ಯಾಪಾರಿ ಮೃತಪಟ್ಟಿದ್ದಾರೆ. ಇವರು ಕಳೆದ ಹಲವು ವರ್ಷಗಳಿಂದ ಸುಳ್ಯದ ಎಪಿಎಂಸಿ ಬಳಿ ಗುಜರಿ ವಸ್ತುಗಳ ವ್ಯಾಪಾರ ಹಾಗೂ ಹಳೆ ಕಟ್ಟಡಗಳ ಕಬ್ಬಿಣ ಸಾಮಗ್ರಿಗಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದರು.

ಕಳೆದ ವರ್ಷ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ವ್ಯವಹಾರ ಸ್ಥಗಿತಗೊಂಡಿತ್ತು. ಹೀಗಾಗಿ, ಇಲ್ಲಿನ ಕಬ್ಬಿಣ ಸಾಮಗ್ರಿಗಳನ್ನು ಸಂಗ್ರಹಿಸುತ್ತಿದ್ದರು. ಇಂದು ಬೆಳಗ್ಗೆ ತಮ್ಮ ಕೆಲಸದಾಳುಗಳ ಜೊತೆ ಕಬ್ಬಿಣದ ವಸ್ತುಗಳನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಗೋಡೆ ಮೈಮೇಲೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.

Malnadu Cashew Factory wall collapse
ಕಟ್ಟಡದ ಗೋಡೆ ಕುಸಿತ

ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹದ ಮಹಜರು ನಡೆಸಿದ್ದಾರೆ. ಅಲ್ಲದೇ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ, ಇಳಿಕೆ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್​ಗೆ ಇಲ್ಲ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.