ಬೆಳ್ತಂಗಡಿ: ವಿದ್ಯುತ್ ಕಂಬ ಸ್ಥಳಾಂತರಿಸುವ ವೇಳೆ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಕಳೆಂಜ ಬಳಿಯ ಶಾಲೆತ್ತಡ್ಕ ಜಂಕ್ಷನ್‌ನಲ್ಲಿ ನಡೆದಿದೆ.
ಮೂಡುಬಿದಿರೆಯ ಖಾಸಗಿ ವಿದ್ಯುತ್ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿ ಪ್ರತಾಪ್ ಮೃತ ವ್ಯಕ್ತಿ. ಪ್ರತಾಪ್ ವಿದ್ಯುತ್ ಶಾಕ್ನಿಂದ ಕಂಬದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ನಾಗಪ್ಪ ಮೂಡುಬಿದಿರೆ ಹಾಗೂ ಕಿಶೋರ್ ಮೂಡುಬಿದಿರೆ ಗಾಯಗೊಂಡಿದ್ದಾರೆ.
ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬ ಸ್ಥಳಾಂತರಿಸುವ ಕೆಲಸ ನಡೆಯುತ್ತಿತ್ತು. ವಿದ್ಯುತ್ ಕಂಬದಲ್ಲಿ ಪ್ರತಾಪ್ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ತಂತಿಯಲ್ಲಿ ವಿದ್ಯುತ್ ಪ್ರವಹಿಸಿ ಪ್ರತಾಪ್ ಕಂಬದಲ್ಲೇ ಮೃತಪಟ್ಟಿದ್ದಾರೆ.