ಮಂಗಳೂರು: ಕುವೈತ್ನ ತೈಲ ಹಾಗೂ ಗ್ಯಾಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಗಳೂರಿನ ವ್ಯಕ್ತಿಯೊಬ್ಬರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ.
ನಗರದ ಪಡೀಲ್ ಕೊಡಕ್ಕಲ್ನ ಸತೀಶ್ ಕೋಚು ಶೆಟ್ಟಿ (45) ಎಂಬುವರು ಮೃತಪಟ್ಟಿದ್ದಾರೆ. ಸತೀಶ್ ಕೋಚು ಶೆಟ್ಟಿಯವರು ಜೂ.11 ರಂದು ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿರುವಾಗ ವಿಷಕಾರಿ ಅನಿಲ ಬಿಡುಗಡೆಯಾಗಿ ಆಕಸ್ಮಿಕವಾಗಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಸತೀಶ್ ಕೋಚು ಶೆಟ್ಟಿಯವರು ರವಿವಾರ ಮಧ್ಯಾಹ್ನ 12.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ಅವರ ಮೃತದೇಹವನ್ನು ಭಾರತಕ್ಕೆ ತರಲು ಸಾಕಷ್ಟು ತೊಂದರೆ ಇದ್ದು, ಅದಾಗ್ಯೂ ಈ ಮೃತದೇಹವನ್ನು ತರಲು ಪ್ರಯತ್ನ ನಡೆಯುತ್ತಿದೆ.