ಮಂಗಳೂರು: ನಗರದ ಖಾಸಗಿ ಬಸ್ ನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ ಎಂದು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ನಡೆದ ಮಾತನಾಡಿ, ಖಾಸಗಿ ಬಸ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಬಗ್ಗೆ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡ ನಂತರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆದ್ರೆ, ಈವರೆಗೆ ಆರೋಪಿ ಸುಳಿವು ಲಭ್ಯವಾಗಿಲ್ಲ ಎಂದರು.
ಯುವಕನಿಂದ ಕಿರುಕುಳ ಅನುಭವಿಸಿದ ಮಹಿಳೆ ತಿಳಿಸಿದಂತೆ ಯುವಕ ಮಲಯಾಳಂ ಭಾಷೆಯಲ್ಲಿ ಮಾತನಾಡುತ್ತಿದ್ದು, ಈತ ಕೇರಳದ ವ್ಯಕ್ತಿ ಇರಬಹುದು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಓದಿ: ಬಸ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಶೀಘ್ರದಲ್ಲೇ ಅರೆಸ್ಟ್ : ಕಮೀಷನರ್ ಶಶಿಕುಮಾರ್