ಮಂಗಳೂರು: ವ್ಯಕ್ತಿವೋರ್ವ ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿದ್ದಾರೆ.
ಕಡಬ ನಿವಾಸಿ ಸದಾಶಿವ (29) ನದಿ ಹಾರಿದವರು. ಶುಕ್ರವಾರ ರಾತ್ರಿ 9.30 ರ ಸುಮಾರಿಗೆ ಇವರು ನೇತ್ರಾವತಿ ಸೇತುವೆಯಿಂದ ಹಾರಿದ್ದು, ಇನ್ನೂ ಪತ್ತೆಯಾಗಿಲ್ಲ. ಮೃತಪಟ್ಟಿರಬಹುದೆಂದು ಶಂಕಿಸಿ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.
ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.