ETV Bharat / state

ಕ್ವಾರಂಟೈನ್​ ಕೇಂದ್ರದಲ್ಲಿ ವ್ಯಕ್ತಿ ಆತ್ಮಹತ್ಯೆ ಪ್ರಕರಣ: ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಕುಕ್ಕುದಡಿ ನಿವಾಸಿ ದಯಾನಂದ ಎಂಬುವರು ಕ್ವಾರಂಟೈನ್ ಕೇಂದ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಇವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಪರಿಹಾರ ನೀಡಲಾಯಿತು.

ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ ವಿತರಣೆ
ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ ವಿತರಣೆ
author img

By

Published : Jan 8, 2021, 5:06 PM IST

ಮಂಗಳೂರು: ಕೊರೊನಾ ಭಯದಿಂದ ಕ್ವಾರಂಟೈನ್ ಕೇಂದ್ರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರದ ಹಣವನ್ನು ಇಂದು ಹಸ್ತಾಂತರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಕುಕ್ಕುದಡಿ ನಿವಾಸಿ ದಯಾನಂದ ಎಂಬುವರು ಕ್ವಾರಂಟೈನ್ ಕೇಂದ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2020 ಮೇ 20ರಂದು ಮುಂಬೈನಿಂದ ಬಂದಿದ್ದ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆದರೆ ಅದೇ ದಿನ ರಾತ್ರಿ ಅವರು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಓದಿ:ಬೆಳ್ತಂಗಡಿ ಸಮೀಪ ಸತ್ತು ಬಿದ್ದ ಹದ್ದುಗಳು; ಹಕ್ಕಿಜ್ವರದ ಆತಂಕ

ಇವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಮಂಜೂರಾಗಿದ್ದು, ಪರಿಹಾರದ ಚೆಕ್​​ನ್ನು ಮೂಡಬಿದರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಮೃತಪಟ್ಟ ದಯಾನಂದ ಕುಟುಂಬಕ್ಕೆ ಇಂದು ಹಸ್ತಾಂತರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.